ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಜೋರು, ಇಂದು ಶಾಲಾ ಕಾಲೇಜುಗಳಿಗೆ ರಜೆ
Views: 10
ಕನ್ನಡ ಕರಾವಳಿ ಸುದ್ದಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಜಿಲ್ಲೆಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 23ರ ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿಗೆ ಜುಲೈ 23ರಂದು ರಜೆ ಅನ್ವಯವಾಗಲಿದೆ. ಜಿಲ್ಲಾಡಳಿತದ ಈ ರಜಾ ಆದೇಶವನ್ನು ಜಿಲ್ಲೆಯ ಎಲ್ಲಾ ಶಿಕ್ಷಣ ಸಂಸ್ಥೆಗಳು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 51(ಬಿ)ರ ಅನ್ವಯ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.






