ಸಾಮಾಜಿಕ

ದಲಿತರಿಗೆ ಅವಮಾನ :ಬಂಧನ ಭೀತಿಯಿಂದ ನಾಪತ್ತೆಯಾದ ಉಪೇಂದ್ರ?

Views: 7

ನಟ ಉಪೇಂದ್ರ ಫೇಸ್ಬುಕ್ ವಿಡಿಯೋ ಸಂದೇಶದಲ್ಲಿ ದಲಿತ ಸಮುದಾಯವನ್ನು ಅವಮಾನ ಮಾಡಿದ್ದು, ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.

ಪೊಲೀಸರು ಇದೀಗ ತನಿಖೆ ಆರಂಭಿಸಿದ್ದಾರೆ.ಉಪೇಂದ್ರ ಅವರ ಮನೆಗೆ ಭೇಟಿ ನೀಡಿರುವ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಅಟ್ರಾಸಿಟಿ ಕೇಸ್ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನಟ ಉಪೇಂದ್ರ ನಾಪತ್ತೆಯಾಗಿದ್ದಾರೆ.

ಉಪೇಂದ್ರ ಅವರ ಕತ್ರಿಗುಪ್ಪೆ ಹಾಗೂ ಸದಾಶಿವ ನಗರದಲ್ಲಿರುವ ಎರಡು ನಿವಾಸಕ್ಕೂ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಅವರು ನಾಪತ್ತೆಯಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ನಟ ಉಪೇಂದ್ರ ಅವರನ್ನು ಪೊಲೀಸರು ಯಾವುದೇ ಕ್ಷಣದಲ್ಲಾದರೂ ಬಂಧನ ಮಾಡುವ ಸಾಧ್ಯತೆ ಇದೆ. ಏಕೆಂದರೆ ಉಪೇಂದ್ರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಿವೆ. ಉಪೇಂದ್ರ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

Related Articles

Back to top button
error: Content is protected !!