ಕರಾವಳಿ

ದುಬೈನ ಫಾರ್ಚ್ಯೂನ್ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥೆಗೆ 2.5 ಕೋಟಿ ವಂಚಿಸಿದ್ದ ಆರೋಪಿಗೆ ಜಾಮೀನು 

Views: 107

ಉಡುಪಿ: ದುಬಾೖ ಉದ್ಯಮಿ ವಕ್ವಾಡಿ ಪ್ರವೀಣ್‌ ಶೆಟ್ಟಿ ಒಡೆತನದ ಫಾರ್ಚುನ್‌ ಗ್ರೂಪ್‌ ಹೊಟೇಲಿಗೆ 2.5 ಕೋ.ರೂ.ವಂಚಿಸಿದ ಪ್ರಕರಣದಲ್ಲಿ ನಾಗೇಶ್‌ ಪೂಜಾರಿಗೆ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಘಟನೆ ಹಿನ್ನೆಲೆ: ದುಬೈನ ಫಾರ್ಚೂನ್‌ ಗ್ರೂಪ್‌ ಆಫ್‌ ಹೋಟೆಲ್ಸ್ ಸಂಬಂಧಿತ ಹೋಟೆಲೊಂದರಲ್ಲಿ ಉದ್ಯೋಗಕ್ಕೆ ಸೇರಿದ್ದ ನಾಗೇಶ್‌ 2.5 ಕೋಟಿಗೂ ಅಧಿಕ ಹಣ ವಂಚಿಸಿದ ಆರೋಪಕ್ಕೆ ಗುರಿಯಾಗಿದ್ದ. ಹೋಟೆಲ್ ಮ್ಯಾನೇಜರ್‌ ಸುನೀಲ್‌ ಕುಮಾರ್‌ ನೀಡಿದ ದೂರಿನಂತೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 25 ಲಕ್ಷಕ್ಕೂ ಹೆಚ್ಚಿನ ಹಣ ಅವ್ಯವಹಾರದ ಬಗ್ಗೆ ತನಿಖೆಯಾದ್ದರಿಂದ ಉಡುಪಿ ಸೆನ್ ಠಾಣೆಗೆ ಪ್ರಕರಣ ವರ್ಗಾವಣೆಗೊಂಡಿತ್ತು.

ಆರೋಪಿ ನಾಗೇಶ್ ಹೈಕೋರ್ಟ್ನಲ್ಲಿ ಎಫ್ಐಆರ್ ಮೇಲಿನ ತನಿಖೆ ಸ್ಥಗಿತಗೊಳಿಸಲು ವಕೀಲರ ಮೂಲಕ ಅರ್ಜಿ ದಾಖಲಿಸಿದ್ದು, 2023ರ ಜುಲೈನಲ್ಲಿ ಆ ಅರ್ಜಿ ವಜಾಗೊಂಡಿತ್ತು. ಬಳಿಕ ಕುಂದಾಪುರದಲ್ಲಿರುವ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ಅದನ್ನು ನ್ಯಾಯಾಲಯ ತಿರಸ್ಕರಿಸಿತ್ತು. ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶಗಳನ್ನು ಮರೆಮಾಚಿ ಬ್ರಹ್ಮಾವರದ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಶರಣಾಗಿ 2023ರ ಆಗಸ್ಟ್ ತಿಂಗಳಿನಲ್ಲಿ ಆರೋಪಿ ಜಾಮೀನು ಪಡೆದುಕೊಂಡಿದ್ದ. ಸರ್ಕಾರ ಈ ಜಾಮೀನು ಪ್ರಶ್ನಿಸಿ ಪರಿಷ್ಕೃತ ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿತ್ತು. ಪ್ರಕರಣದ ವಿಚಾರಣೆಯ‌ನ್ನು ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಕೈಗೊಂಡಿದ್ದು, ಅಲ್ಲಿಯೂ ಜೆಎಂಎಫ್ಸಿ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿ ಆದೇಶ ನೀಡಲಾಗಿತ್ತು. ಈ ತೀರ್ಪಿನ ಬಳಿಕ ಆರೋಪಿ ತನ್ನ ಪರ ವಕೀಲರ ಮೂಲಕ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ. ಇದರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ‌ನ್ಯಾಯಾಧೀಶರಾದ ನಾಗಪ್ರಸನ್ನ ಅವರು ಜೆಎಂಎಫ್ಸಿ ನ್ಯಾಯಾಲಯ ನೀಡಿದ ಜಾಮೀನು ರದ್ದುಗೊಳಿಸಿದ್ದರು.ಇದೀಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

.

Related Articles

Back to top button
error: Content is protected !!