ದುಬೈ ಏರ್ ಪೋರ್ಟ್ ಮೇಲೆ ಇರಾನ್ ಡ್ರೋನ್ ದಾಳಿ: ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ
Views: 54
ಕನ್ನಡ ಕರಾವಳಿ ಸುದ್ದಿ: ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ.
ಇರಾನ್ ದಾಳಿಯಿಂದ ಹಾರಾಟ ನಡೆಸುತ್ತಿದ್ದ ವಿಮಾನಗಳು, ಸಂಚರಿಸುತ್ತಿದ್ದ ಮೆಟ್ರೋ ರೈಲು ಸ್ವಲ್ಪದರಲ್ಲಿಯೇ ಅನಾಹುತದಿಂದ ತಪ್ಪಿದೆ. ವಿಮಾನ ನಿಲ್ದಾಣದ ಮೇಲೆ ದಾಳಿ ಬೆನ್ನಲ್ಲೇ ದುಬೈ ಏರ್ ಪೋರ್ಟ್ ನಲ್ಲಿ ವಿಮಾನ ಹಾರಾಟ ಸಂಪೂರ್ಣ ಸ್ಥಗಿತಗೊಂಡಿದೆ.
ಡ್ರೋನ್ ಬಿದ್ದಿರುವ ಜಾಗದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸಾವು-ನೋವಿನ ಬಗ್ಗೆ ಯಾವುದೇ ವರದಿಯಾಗಿಲ್ಲ. ದುಬೈಗೆ ಆಗಮಿಸುವ ಹಾಗೂ ನಿರ್ಗಮಿಸುವ ಎಲ್ಲಾ ವಿಮಾನಗಳನ್ನು ಮುಂದಿನ ಸೂಚನೆವರೆಗೂ ಸ್ಥಗಿತಗೊಳಿಸಲಾಗಿದೆ.
ದುಬೈ ಮೇಲೆ ಯಾಕೆ ದಾಳಿ?
ಇರಾನಿಗೆ ಅಮೆರಿಕದ ಮೇಲೆ ನೇರವಾಗಿ ದಾಳಿ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ನೆಲೆಗಳಿರುವ ದೇಶಗಳ ಮೇಲೆ ಇರಾನ್ ದಾಳಿ ನಡೆಸುತ್ತಿದೆ. ನಿಮ್ಮ ನೆಲೆಗಳನ್ನು ಬಳಸಿ ನಮ್ಮ ಮೇಲೆ ಅಮೆರಿಕ ದಾಳಿ ನಡೆಸುತ್ತಿದೆ. ಆ ನೆಲೆಗಳನ್ನು ಬಳಸಲು ಅವಕಾಶ ನೀಡಿದರೆ ನಿಮ್ಮ ಮೇಲೆ ದಾಳಿ ನಡೆಸುತ್ತೇವೆ ಎಂಬ ಸಂದೇಶಕ್ಕಾಗಿ ಈಗ ಡ್ರೋನ್, ಕ್ಷಿಪಣಿ ದಾಳಿ ನಡೆಸುತ್ತಿದೆ.






