ಯುವಜನ

ದೇವರ ದರ್ಶನ ಮುಗಿಸಿ ಬರುವಾಗ ಭೀಕರ ಅಪಘಾತದಲ್ಲಿ ಅಣ್ಣ-ತಂಗಿ ದುರ್ಮರಣ 

Views: 41

ಕನ್ನಡ ಕರಾವಳಿ ಸುದ್ದಿ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಭೋಸರಿ ಪ್ರದೇಶದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು ಇಡೀ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

ಪಿಂಪ್ರಿ-ಚಿಂಚ್‌ವಾಡ್ ಕುಲಾಲ ಸಂಘದ ಅಧ್ಯಕ್ಷರಾದ ರವಿ ಮೂಲ್ಯ ಅವರ ಇಬ್ಬರು ಮಕ್ಕಳಾದ ಕೌಶಿಕ್ ಮೂಲ್ಯ (21) ಮತ್ತು ಋಷಿತಾ ಮೂಲ್ಯ (17) ಅಣ್ಣ-ತಂಗಿ ಈ ದುರ್ಘಟನೆಯಲ್ಲಿ ಅಸುನೀಗಿದ್ದಾರೆ.

ಹಳೆಯ ಪುಣೆ-ಮುಂಬೈ ಹೆದ್ದಾರಿಯ ಹೋಟೆಲ್ ಪೂನಾ ಗೇಟ್ ಎದುರು ಈ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ದೇವರ ದರ್ಶನ ಮುಗಿಸಿ ತಮ್ಮ ದ್ವಿಚಕ್ರ ವಾಹನದಲ್ಲಿ ಮನೆಗೆ ಹಿಂದಿರುಗುತ್ತಿದ್ದ ಅಣ್ಣ-ತಂಗಿಯರ ಮೇಲೆ ಅತಿವೇಗವಾಗಿ ಬಂದ ಮತ್ತೊಂದು ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಕಣ್ಣಿನೆದುರೇ ಇದ್ದ ಇಬ್ಬರು ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಹಾಗೂ ನೋವು ಕಲ್ಲು ಹೃದಯವನ್ನೂ ಕರಗಿಸುವಂತಿದೆ.

 

Related Articles

Back to top button
error: Content is protected !!