ಇತರೆ

ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಕಾರು ಪಲ್ಟಿ:ಮೂವರು ಸಾವು 

Views: 74

ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಒಂದೇ ಕುಟುಂಬದ ಮೂವರು ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡರು ಗಾಯಗೊಂಡಿರುವ ಘಟನೆ ಬಳ್ಳಾರಿ, ಸಿರುಗುಪ್ಪ ರಾಜ್ಯ ಹೆದ್ದಾರಿಯ ದೇವಿ ನಗರ ಕ್ಯಾಂಪ್ ಬಳಿ ಇಂದು ಮುಂಜಾನೆ ನಡೆದಿದೆ.

ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ,ನಿಟ್ಟೂರು ಗ್ರಾಮದ ಪ್ರಸಾದ್ ರಾವ್, ಸಂದ್ಯಾ ಹಾಗೂ ವಿಜಯಾ ಮೃತಪಟ್ಟವರು. ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಒಂದೇ ಕುಟುಂಬದ ಐವರು ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್ ಬರುವಾಗ ಈ ದುರ್ಘಟನೆ ನಡೆದಿದೆ.

ಅತಿವೇಗ ಅಥವಾ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ಕಟ್ಟೆಗೆ ಡಿಕ್ಕಿಯಾಗಿ ಪಲ್ಟಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಅಪಘಾತದ ಮಾಹಿತಿ ತಿಳಿದ ಕೂಡಲೇ ಸಿರುಗುಪ್ಪ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

Back to top button
error: Content is protected !!