ಇತರೆ

ದೇವಸ್ಥಾನದ ಗರ್ಭಗುಡಿಯಲ್ಲಿ ಅರ್ಚಕನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ

Views: 48

ಕನ್ನಡ ಕರಾವಳಿ ಸುದ್ದಿ: ದೇವಸ್ಥಾನದ ಗರ್ಭಗುಡಿಯಲ್ಲೇ ದೇವರ ಅರ್ಚಕನೊಬ್ಬ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಹೈದರಾಬಾದ್‌ನ ರಾಮಚಂದ್ರಾಪುರಂ ವ್ಯಾಪ್ತಿಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಮಚಂದ್ರಾಪುರಂನ ಸ್ಥಳೀಯ ದೇವಸ್ಥಾನವೊಂದರಲ್ಲಿ ಸಾಯಂ ಎಂಬ ವೃದ್ಧ ವ್ಯಕ್ತಿ ಅರ್ಚಕರಾಗಿ ಕಾರ್ಯನಿರ್ವಹಿಸುತ್ತಿದ್ದ. ಹೀಗಿರುವಾಗ ಗರ್ಭಗುಡಿಯ ಬಾಗಿಲು ಒಳಗಿನಿಂದ ಮುಚ್ಚಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಮೂಡಿದೆ. ತಕ್ಷಣ ದೇವಸ್ಥಾನದ ಬಾಗಿಲು ತೆರೆದು ಒಳಗೆ ಪರಿಶೀಲಿಸಿದಾಗ, ಆ ವೃದ್ಧ ಅರ್ಚಕ ಅಪ್ರಾಪ್ತ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ದೃಶ್ಯ ಕಂಡುಬಂದಿದೆ ಎಂದು ವರದಿಯಾಗಿದೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಆರೋಪಿಯನ್ನು ಸ್ಥಳದಲ್ಲೇ ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಪಡೆದ ರಾಮಚಂದ್ರಾಪುರಂ ಪೊಲೀಸರು ಸ್ಥಳಕ್ಕೆ ಆಗಮಿಸಿ ಬಾಲಕಿಯನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆರೋಪಿಯಾಗಿರುವ ಅರ್ಚಕ ಸಾಯಂನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!