ಇತರೆ

ದೇವಸ್ಥಾನ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಹೊಡೆದಾಟ;ಪೊಲೀಸ್ ಠಾಣೆಯಲ್ಲಿ ದೂರು

Views: 91

ಕನ್ನಡ ಕರಾವಳಿ ಸುದ್ದಿ: ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಬಾರೀ ಗಲಾಟೆ ಕೊಪ್ಪಳ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ದೇವಾಲಯಕ್ಕೆ ಬಂದಿದ್ದ ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ಮತ್ತು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ ಇಬ್ಬರ ನಡುವೆಯೂ ತೀವ್ರವಾದ ವಾಗ್ವಾದ ನಡೆದಿದೆ. ಬಳಿಕ ಅವಾಚ್ಯ ಶಬ್ದಗಳನ್ನು ಬಳಸಿ ನಿಂದನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರ ಸಮ್ಮುಖದಲ್ಲೇ ಇಬ್ಬರು ಸ್ವಾಮೀಜಿಗಳು ಹೊಡೆದಾಡಿಕೊಂಡಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ, ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿ ನಿಂದನೆ ಮಾಡಿದ್ದಾರೆ ಎಂದು ವಿದ್ಯಾದಾಸ ಬಾಬಾ ಸ್ವಾಮೀಜಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

Back to top button
error: Content is protected !!