ರಾಜಕೀಯ

ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮುಖ್ಯಮಂತ್ರಿಗಳ ಪೈಕಿ ಡಿಕೆಶಿ ಪ್ರಮಾಣ ವಚನಕ್ಕೆ ಕ್ಷಣಗಣನೆ

Views: 17

ಕನ್ನಡ ಕರಾವಳಿ ಸುದ್ದಿ: ಕರ್ನಾಟಕದ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇಶದ ಅತ್ಯಂತ ಶ್ರೀಮಂತ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದು, ಮುಖ್ಯಮಂತ್ರಿಗಳ ಪೈಕಿ ಅಗ್ರಸ್ಥಾನದಲ್ಲಿ ಇರಲಿದ್ದಾರೆ. ಅವರ ಆಸ್ತಿ ಮೌಲ್ಯ ಸುಮಾರು ರೂ.1,413 ಕೋಟಿ ಎಂದು ವರದಿಯಾಗಿದೆ.

ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವವರು ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರ ಘೋಷಿತ ಆಸ್ತಿ ಮೌಲ್ಯ ರೂ.931 ಕೋಟಿ ಎಂದು ಹೇಳಲಾಗಿದೆ.

ಮೂರನೇ ಸ್ಥಾನದಲ್ಲಿ ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್ ಇದ್ದು, ಅವರ ಆಸ್ತಿ ಮೌಲ್ಯ ಸುಮಾರು ರೂ.648 ಕೋಟಿ ಎಂದು ವರದಿಯಾಗಿದೆ. ನಾಲ್ಕನೇ ಸ್ಥಾನದಲ್ಲಿ ಅರುಣಾಚಲ ಪ್ರದೇಶದ ಪೇಮಾ ಖಂಡು ರೂ.332 ಕೋಟಿ ರೂ. ಆಸ್ತಿ ಹೊಂದಿದ್ದಾರೆ.

ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಕರ್ನಾಟಕದ ಸಿದ್ದರಾಮಯ್ಯ ಪಡೆದಿದ್ದು, ಅವರ ಘೋಷಿತ ಆಸ್ತಿ ಮೌಲ್ಯ ರೂ. 51 ಕೋಟಿ ಎಂದು ಹೇಳಲಾಗಿದೆ.

ಈ ಮೂಲಕ ದೇಶದ ಮೂವರು ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಇಬ್ಬರು ನಾಯಕರು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ರಾಜಕೀಯ ಕ್ಷೇತ್ರದಲ್ಲಿ ಪ್ರಭಾವದ ಜೊತೆಗೆ ಆಸ್ತಿ ಸಂಪತ್ತಿನ ವಿಚಾರದಲ್ಲಿಯೂ ಡಿ.ಕೆ. ಶಿವಕುಮಾರ್ ಗಮನ ಸೆಳೆದಿದ್ದಾರೆ.

Related Articles

Back to top button
error: Content is protected !!