ಶಿಕ್ಷಣ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್: ಫಲಿತಾಂಶ ಬೆನ್ನಲ್ಲೇ ವಿದ್ಯಾರ್ಥಿನಿ ಆತ್ಮಹತ್ಯೆ

Views: 306
ಕನ್ನಡ ಕರಾವಳಿ ಸುದ್ದಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿಯೊಬ್ಬಳು ಫಲಿತಾಂಶ ಬೆನ್ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.
ನಗರದ ಒಂಟಿಕೊಪ್ಪಲ್‌ನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಐಶ್ವರ್ಯ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಫಲಿತಾಂಶ ನೋಡಿದ ಬಳಿಕ ಕಲಾಮಂದಿರ ಅಪಾರ್ಟೆಂಟ್‌ನಲ್ಲಿ ಐಶ್ವರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಫೇಲ್ ಆಗಿದ್ದಕ್ಕೆ ಮನನೊಂದ ಐಶ್ವರ್ಯ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ