ಶಿಕ್ಷಣ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;ದಾಖಲೆ ಮಟ್ಟದಲ್ಲಿ ಫಲಿತಾಂಶ ಏರಿಕೆ, ರಿಸೆಲ್ಟ್ ನೋಡುವುದು ಹೇಗೆ?

Views: 69

ಕನ್ನಡ ಕರಾವಳಿ ಸುದ್ದಿ: 2025-26ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಈ ಬಾರಿ ಶೇ.86 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ವರ್ಷಕ್ಕಿಂತ ಶೇ.12.50 ಫಲಿತಾಂಶ ಏರಿಕೆ ಕಂಡಿದೆ. ಫಲಿತಾಂಶವನ್ನು karresults.nic.in ಅಥವಾ Karnataka one ಮೊಬೈಲ್‌ ಆ್ಯಪ್‌ ಮೂಲಕ ಪಡೆಯಬಹುದು.

ಕಳೆದ ವರ್ಷ 73.45 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಈ ಬಾರಿ ಶೇ.86 ವಿದ್ಯಾರ್ಥಿಗಳು ಪಾಸ್‌ ಆಗಿದ್ದು, ದಾಖಲೆ ಮಟ್ಟದಲ್ಲಿ ಫಲಿತಾಂಶದಲ್ಲಿ ಏರಿಕೆ ದಾಖಲಾಗಿದೆ. ಇನ್ನು ಫಲಿತಾಂಶದ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ‘ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ’ಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾವಾರು ಸಾಧನೆ, ತೇರ್ಗಡೆ ಪ್ರಮಾಣ ಹಾಗೂ ಟಾಪರ್‌ಗಳ ವಿವರಗಳನ್ನು ಸಚಿವರು ಅಧಿಕೃತವಾಗಿ ಹಂಚಿಕೊಳ್ಳಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?

ಮೊದಲು ಅಧಿಕೃತ ವೆಬ್‌ಸೈಟ್ karresults.nic.in ಗೆ ಲಾಗ್ ಇನ್ ಆಗಿ.

ಮುಖಪುಟದಲ್ಲಿ ಕಾಣುವ ‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.

ಮಾಹಿತಿ ಭರ್ತಿ ಮಾಡಿದ ನಂತರ ‘Submit’ ಬಟನ್ ಒತ್ತಿರಿ.

ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸಲಿದೆ. ಭವಿಷ್ಯದ ಬಳಕೆಗಾಗಿ ಇದನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ರಾಜ್ಯದಲ್ಲಿ ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ 7,10,363 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 5,174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು. ಇದೀಗ ಫಲಿತಾಂಶ ಬಿಡುಗಡೆಯಾಗಿದೆ.

ಅಂಕಪಟ್ಟಿ ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ

ಶಾಲಾ ಶಿಕ್ಷಣ ಇಲಾಖೆ ಪ್ರಪ್ರಥಮ ಬಾರಿಗೆ ಡಿಜಿಲಾಕರ್ (DigiLocker) ಮೂಲಕ ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ.

Related Articles

Back to top button
error: Content is protected !!