ಶಿಕ್ಷಣ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2ರ ವೇಳಾಪಟ್ಟಿ,ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ ಪ್ರಕಟ 

Views: 135

ಬೆಂಗಳೂರು: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು ಬುಧವಾರ ಪ್ರಕಟವಾಗಿದೆ.    ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 2 ನಡೆಯಲಿದ್ದು, ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.

ದ್ವಿತೀಯ PUC ಫಲಿತಾಂಶಗಳು karresults.nic.in ನಲ್ಲಿ ಲಭ್ಯವಿರುತ್ತವೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯ ಸಂಯೋಜನೆ/ಸ್ಟ್ರೀಮ್ ಅನ್ನು ಬಳಸಿಕೊಂಡು ಅದನ್ನು ಪರಿಶೀಲಿಸಬಹುದು. ವಿದ್ಯಾರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು

karresults.nic.in ನಲ್ಲಿ ಕರ್ನಾಟಕ ಫಲಿತಾಂಶ ಪೋರ್ಟಲ್‌ಗೆ ಭೇಟಿ ನೀಡಿ.

ನೀಡಲಾದ ಪಿಯುಸಿ 2 ಪರೀಕ್ಷೆಯ ಫಲಿತಾಂಶದ ಲಿಂಕ್ ಅನ್ನು ತೆರೆಯಿರಿ.

ಲಾಗಿನ್ ಪುಟದಲ್ಲಿ, ನಿಮ್ಮ KSEAB ನೋಂದಣಿ ಸಂಖ್ಯೆಯನ್ನು ಒದಗಿಸಿ; ವಿಷಯ ಸಂಯೋಜನೆ ಅಥವಾ ಸ್ಟ್ರೀಮ್ ಅನ್ನು ಆಯ್ಕೆ ಮಾಡಿ (ವಿಜ್ಞಾನ/ಕಲೆ/ವಾಣಿಜ್ಯ)

ನಿಮ್ಮ 2ನೇ ಪಿಯುಸಿ ಫಲಿತಾಂಶವನ್ನು ಮುಂದಿನ ಪುಟದಲ್ಲಿ ಪರಿಶೀಲಿಸಿ.

ಉತ್ತರ ಪತ್ರಿಕೆ ಡೌನ್ಲೋಡ್, ಮರು ಮೌಲ್ಯಮಾಪನ, ಮರು ಎಣಿಕೆ ದಿನಾಂಕ 

ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆ ಪ್ರತಿ ಪಡೆಯಲು ಅರ್ಜಿ ಸಲ್ಲಿಕೆ, ಡೌನ್‌ಲೋಡ್‌ ಮಾಡಿಕೊಳ್ಳಲು ಹಾಗೂ ಮರು ಮೌಲ್ಯಮಾಪನ ಹಾಗೂ ಮರು ಅಂಕ ಎಣಿಕೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶವನ್ನು ಕಲ್ಪಿಸಲಾಗಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ

ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ

9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ

11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ

13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ

16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

 

Related Articles

Back to top button