ಶಿಕ್ಷಣ

ದ್ವಿತೀಯ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ 

Views: 53

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ಇದರ ಅಂತಿಮ ವೇಳಾಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಏಪ್ರಿಲ್ 29ರಿಂದ ಮೇ 16ರವರೆಗೆ 2ನೇ ಪರೀಕ್ಷೆಯನ್ನು ನಡೆಸಲಾಗುವುದು.

2ನೇ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಇಂತಿದೆ:

ಏಪ್ರಿಲ್ 29ರಂದು ಕನ್ನಡ/ಅರೇಬಿಕ್, 30ರಂದು ಇತಿಹಾಸ/ಭೌತಶಾಸ್ತ್ರ

ಮೇ 2ರಂದು ಇಂಗ್ಲಿಷ್, 3ರಂದು ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ, 4ರಂದು ಭೂಗೋಳ ಶಾಸ್ತ್ರ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಗೃಹ ವಿಜ್ಞಾನ, ಮೂಲಗಣಿತ

9ರಂದು ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ

11ರಂದು ಸಮಾಜಶಾಸ್ತ್ರ, ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಿಕ ವಿಜ್ಞಾನ

13ರಂದು ಅರ್ಥಶಾಸ್ತ್ರ, 14ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, 15ರಂದು ಹಿಂದಿ

16ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ವಾರ್ಷಿಕ ಪರೀಕ್ಷೆ 1ರಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಆಗದ ಹಾಗೂ ಅನುತ್ತೀರ್ಣರಾದ ವಿದ್ಯಾರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

2nd PUC Exam: ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ‌ ಸಲ್ಲಿಸಲು ಏಪ್ರಿಲ್ 10ರಿಂದ ಏಪ್ರಿಲ್ 16ರವರೆಗೆ ಅವಕಾಶವನ್ನು ಕಲ್ಪಿಸಲಾಗಿದೆ. ಉತ್ತರ ಪತ್ರಿಕೆ ಸ್ಕ್ಯಾನ್ಡ್ ಪ್ರತಿ ಡೌನ್‌ಲೋಡ್ ಮಾಡಿಕೊಳ್ಳಲು ಏಪ್ರಿಲ್ 14ರಿಂದ ಏಪ್ರಿಲ್ 19ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮರು ಮೌಲ್ಯಮಾಪನಕ್ಕಾಗಿ ಹಾಗೂ ಮರು ಅಂಕ ಎಣಿಕೆಗಾಗಿ ಅರ್ಜಿ ಸಲ್ಲಿಸಲು ಏಪ್ರಿಲ್ 14ರಿಂದ ಏಪ್ರಿಲ್ 20ರವರೆಗೆ ಅವಕಾಶ ಕಲ್ಪಿಸಲಾಗಿದೆ. ಸ್ಕ್ಯಾನ್ಡ್ ಪ್ರತಿ ಪಡೆಯಲು ಪ್ರತಿ ವಿಷಯಕ್ಕೆ 530 ರೂಪಾಯಿ ಶುಲ್ಕವನ್ನು ವಿಧಿಸಲಾಗಿದೆ. ಮರು ಮೌಲ್ಯಮಾಪನದ ಶುಲ್ಕ ಪ್ರತಿ ವಿಷಯಕ್ಕೆ 1670 ರೂಪಾಯಿ ಆಗಿರುತ್ತದೆ.

Related Articles

Back to top button