ಧರ್ಮಸ್ಥಳಕ್ಕೆ ಅನ್ಯಾಯವಾಗಿರುವುದು ಬಿಜೆಪಿಯವರಿಂದಲೇ: ಡಿ.ಕೆ.ಶಿವಕುಮಾರ್

Views: 43
ಕನ್ನಡ ಕರಾವಳಿ ಸುದ್ದಿ: ಧರ್ಮಸಳ ಪ್ರಕರಣದ ಬುರುಡೆ ಗಿರಾಕಿಗಳಲ್ಲಿ ಬಿಜೆಪಿಯವರೇ ಇದ್ದಾರೆ ಎಂದು ಉಪಮುಖ್ಯಮಂತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ನ್ಯಾಯ ಒದಗಿಸಿರುವವರು ನಾವು. ಆದರೆ ಅವರು ನಮಗಿಂತ ಮುಂಚಿತವಾಗಿ ಹೈಸ್ಪೀಡ್‌ನಲ್ಲಿ ಬಿಜೆಪಿಯ ಎರಡು ಗುಂಪುಗಳ ನಡುವಣ ತಿಕ್ಕಾಟಕ್ಕೆ ಧರ್ಮಸ್ಥಳವನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ.ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡಿದವರು ಬಿಜೆಪಿಯವರು. ಬುರುಡೆ ಗಿರಾಕಿ ಯಾರು? ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ ಎಂದು ಟೀಕಿಸಿದರು.
ನಾಡ ಹಬ್ಬ ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಬಗ್ಗೆ ಕೇಳಿದಾಗ, ಇದರ ಹೊರತಾಗಿ ರಾಜಕೀಯ ಮಾಡಲು ಅವರಿಗೆ ಬೇರೆ ವಿಚಾರ ಇಲ್ಲ, ಅವರಿಗೆ ರಾಜ್ಯದ ಬಗ್ಗೆ ಕಾಳಜಿ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ಸರಕಾರದ ಮೇಲೆ ಒತ್ತಡ ತಂದು ಬೆಂಗಳೂರು ಅಭಿವೃದ್ಧಿಗೆ ಅನುದಾನ, ಮೇಕೆದಾಟು, ಮಹದಾಯಿ, ಕೃಷ್ಣ ಮೇಲ್ದಂಡೆ ಯೋಜನೆಗಳಿಗೆ ಅನುಮತಿ, ನರೇಗಾ ಅನುದಾನ ಕೊಡಿಸಲಿ. ಅದನ್ನು ಬಿಟ್ಟು ಈ ರೀತಿ ಖಾಲಿ ಮಾತು ಆಡೋದು ಬೇಡ. ಕೇವಲ ಪ್ರಚಾರಕ್ಕೆ ಅವರೆಲ್ಲ ಹೀಗೆ ರಾಜಕೀಯ ಮಾಡುತ್ತಾರೆ ಎಂದು ಹರಿಹಾಯ್ದರು.