ಇತರೆ

ಧರ್ಮಸ್ಥಳಕ್ಕೆ ತೆರಳುತ್ತಿದ್ದಾಗ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು 

Views: 54

ಕನ್ನಡ ಕರಾವಳಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೂಡಿಗೆರೆಯ ಕೊಟ್ಟಿಗೆಹಾರ ಬಳಿ ನಡೆದಿದೆ.

ಗುರುಕಿರಣ್(28), ಮೋಹನ್(30) ಹಾಗೂ ಜ್ಞಾನೇಶ್‌(28) ಮೃತಪಟ್ಟ ಯುವಕರು.

ಪ್ರೇಮ್ ಕುಮಾರ್ ಮತ್ತು ಹೃತಿಕ್ ಗಂಭೀರವಾಗಿ ಗಾಯಗೊಂಡವರು. ಇನ್ನು ಗಾಯಾಳುಗಳನ್ನು ತಕ್ಷಣ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ತುಮಕೂರು ಮೂಲದವರೆಂದು ತಿಳಿದು ಬಂದಿದ್ದು, ಇನ್ನು ಇವರೆಲ್ಲಾ ತುಮಕೂರಿನಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ ಎನ್ನಲಾಗಿದೆ.

ಕೊಟ್ಟಿಗೆಹಾರದಲ್ಲಿ ಪೆಟ್ರೋಲ್ ಬಂಕ್ ಮುಂಭಾಗ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಸಿಲಿಂಡರ್ ತುಂಬಿದ ಲಾರಿಗೆ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಣಕಲ್ ಪೊಲೀಸರು ಭೆಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!