ಧರ್ಮಸ್ಥಳದಲ್ಲಿ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಪೊಲೀಸ್ ಠಾಣೆ ಎಂದು ಘೋಷಿಸಿದ ಸರ್ಕಾರ

Views: 167
ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದಲ್ಲಿ ಮಹಿಳೆಯರು, ಯುವತಿಯರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ)ವನ್ನು ರಚನೆ ಮಾಡಿತ್ತು. ಸದ್ಯ ಇದೀಗ ಈ ಎಸ್ಐಟಿಯನ್ನು ಪೊಲೀಸ್ ಠಾಣೆ ಎಂದು ಘೋಷಿಸಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಆರೋಪದಡಿ ತನಿಖೆಗೆ ರಚನೆಯಾಗಿದ್ದ ಎಸ್ಐಟಿಗೆ ಪೊಲೀಸ್ ಠಾಣೆ ಮಾನ್ಯತೆಯನ್ನ ಸರ್ಕಾರ ನೀಡಿದೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಕಲಂ 2 (1)(ಯು) ಅಡಿಯಲ್ಲಿ ನೀಡಿರುವ ಅಧಿಕಾರವನ್ನು ಚಲಾಯಿಸಿದ ಸರ್ಕಾರದ ಆದೇಶದಂತೆ 2025 ಜುಲೈ 19 ರಂದು ರಚನೆ ಮಾಡಲಾದ ಎಸ್ಐಟಿಯನ್ನು ಪೊಲೀಸ್ ಠಾಣೆ ಎಂದು ಅನೌನ್ಸ್ ಮಾಡಲಾಗಿದೆ.
ಎಸ್ಐಟಿಗೆ ನೇಮಕ ಮಾಡಲಾದ ಪೊಲೀಸ್ ನಿರೀಕ್ಷಕರ ದರ್ಜೆಯ/ಮೇಲ್ಪಟ್ಟ ದರ್ಜೆಯ ಅಧಿಕಾರಿಯನ್ನು ಬಿಎನ್ಎಸ್ಎಸ್ ಅಡಿ ಠಾಣಾ ಅಧಿಕಾರಿ ಎಂದು ಘೋಷಣೆ ಮಾಡಲಾಗಿದೆ. ಎಸ್ಐಟಿ ಬಿಎನ್ಎಸ್ಎಸ್ ಅಡಿ ತನಿಖಾ ಕ್ರಮಗಳನ್ನು ಅನುಸರಿಸಿ ರಚಿಸಿರುವ ಸಂಬಂಧಪಟ್ಟ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಕೆ ಮಾಡುವಂತಹ ಅಧಿಕಾರವನ್ನು ಸರ್ಕಾರ ನೀಡಿದೆ






