ಜನಮನ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 35 ಶಿಕ್ಷಕರ ನಿಯೋಜನೆ

Views: 7

ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ಕಛೇರಿಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಸುಬ್ರಹ್ಮಣ್ಯ ಶೆಟ್ಟಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳ ಸಾಮರ್ಥ್ಯವನ್ನು ಅರಿತು ಅವರ ಸರ್ವತೋಮುಖ ಬೆಳವಣಿಗೆಗೆ ಶ್ರಮಿಸಬೇಕು. ಸಮಾಜದಲ್ಲಿ ಎಲ್ಲಾ ಹುದ್ದೆಗಳಿಗಿಂತ ಶಿಕ್ಷಕರ ಹುದ್ದೆ ಉತ್ತಮ ಸ್ಥಾನ ಹೊಂದಿದೆ. ಮಕ್ಕಳನ್ನು ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಶಿಕ್ಷಕರು ತಮ್ಮ ಮೇಲಿರುವ ಜವಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಿ ಎಂದು ಕರೆ ನೀಡಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಲಕ ಶಿಕ್ಷಕರ ಕೊರತೆ ಇರುವ ಗ್ರಾಮೀಣ ಭಾಗದ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಪ್ರಸಕ್ತ ಸಾಲಿನಲ್ಲಿ ಜ್ಞಾನದೀಪ ಶಿಕ್ಷಕರಾಗಿ ಕುಂದಾಪುರ ತಾಲೂಕಿನಲ್ಲಿ ಒಟ್ಟು 35 ಶಿಕ್ಷಕರನ್ನು ಆಯ್ಕೆ ಮಾಡಲಾಗಿರುತ್ತದೆ. ಶ್ರೀ ಕ್ಷೇತ್ರದ ವತಿಯಿಂದ ಪ್ರತೀ ವರ್ಷದಂತೆ ಈ ವರ್ಷವು ಕೂಡಾ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೀಡಲಾದ ಉಡುಗೊರೆಯನ್ನು ಅವರು ಎಲ್ಲಾ ಜ್ಞಾನದೀಪ ಶಿಕ್ಷಕರಿಗೂ ಹಸ್ತಾಂತರಿಸಿ ಶುಭಕೋರಿದರು.

ಶಿಕ್ಷಕರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ಕಛೇರಿಯ ಹಣಕಾಸು ಪ್ರಬಂಧಕ ಗಂಗಾಧರ, ಮೇಲ್ವಿಚಾರಕ ವರ್ಗದ ವೇದಾವತಿ, ಪ್ರದೀಪ್‌ ಹಾಗೂ ಆಡಳಿತ ಸಹಾಯಕಿ ವಂದನಾ ಮತ್ತು ಎಲ್ಲಾ ಜ್ಞಾನದೀಪ ಶಿಕ್ಷಕರು ಮತ್ತು ಕಛೇರಿಯ ಸಹಾಯಕರು ಉಪಸ್ಥಿತರಿದ್ದರು.

Related Articles

Back to top button
error: Content is protected !!