ರಾಜಕೀಯ

ಧರ್ಮಸ್ಥಳ ಚಲೋ ಯಾತ್ರೆ:ಎನ್‌ಐಎ ತನಿಖೆಗೆ ನಿಖಿಲ್ ಕುಮಾರಸ್ವಾಮಿ ಒತ್ತಾಯ

Views: 37

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದ್ದು, ಜೆಡಿಎಸ್ ಯುವ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಹಮ್ಮಿಕೊಳ್ಳಲಾಗಿದೆ.

ಪಾದಯಾತ್ರೆ ವೇಳೆ ಮಾತನಾಡಿರುವ ನಿಖಿಲ ಕುಮಾರಸ್ವಾಮಿ, ಇದು ರಾಜಕೀಯ ಕಾರ್ಯಕ್ರಮವಲ್ಲ. ಎಲ್ಲಾ ರಾಜಕೀಯ ಪಕ್ಷಗಳಲ್ಲಿರುವ ಭಕ್ತಾದಿಗಳೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಸನಾತನ ಧರ್ಮವನ್ನು ರಕ್ಷಿಸಬೇಕಿದೆ ಎಂದರು.

ಇಂದು ನಾವೆಲ್ಲರೂ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಹೋಗುತ್ತಿದ್ದೇವೆ. ಧರ್ಮಸ್ಥಳ ಸತ್ಯ ಯಾತ್ರೆ ಎಂದು ಇದಕ್ಕೆ ಹೆಸರಿಸಲಾಗಿದೆ. ಮಂಜುನಾಥ ಸ್ವಾಮಿ ಹಾಗೂ ಅಣ್ಣಪ್ಪ ಸ್ವಾಮಿಯ ಲಕ್ಷಾಂತರ ಮಂದಿ ಭಕ್ತಾದಿಗಳು ಈ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ನಾನು ಇದು ರಾಜಕೀಯ ಕಾರ್ಯಕ್ರಮವಲ್ಲ ಎಂದು ಸ್ಪಷ್ಟಪಡಿಸುತ್ತಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಧರ್ಮಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇತ್ತೀಚಿಗೆ ನಡೆದ ಅನುಮಾನಾಸ್ಪದ ಘಟನೆಗಳ ಬಗ್ಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಈ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡುವಂತೆ ಒತ್ತಾಯಿಸುವುದಾಗಿ ಹೇಳಿದರು.

Related Articles

Back to top button