ಧಾರ್ಮಿಕ

ಧರ್ಮಸ್ಥಳ: ಧರ್ಮ ಜಾಗೃತಿ ಸಮಾವೇಶದಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳೇನು?

Views: 109

ಕನ್ನಡ ಕರಾವಳಿ ಸುದ್ದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶುಕ್ರವಾರ ಧಾರ್ಮಿಕ ಕ್ಷೇತ್ರಗಳ ಮುಖಂಡರ ಧರ್ಮ ಜಾಗೃತಿ ಸಮಾವೇಶ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.

ಈ ವೇಳೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಮನವಿ ಸಲ್ಲಿಸಲು ನಿರ್ಣಯಿಸಿದ್ದಾರೆ. ಇನ್ನು ಇದರ ಜೊತೆಗೆ ಸಮಾವೇಶದಲ್ಲಿ ಮಹತ್ವದ  ನಿರ್ಣಯಗಳನ್ನು ಕೈಗೊಂಡಿದ್ದು, ಅವು ಈ ಕೆಳಗಿನಂತಿವೆ.

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ ಮೂಲಕ ತನಿಖೆ ನಡೆಸುವಂತೆ ಪ್ರಧಾನ ಮಂತ್ರಿಗಳಿಗೆ ಮತ್ತು ಕೇಂದ್ರದ ಗೃಹ ಸಚಿವರಿಗೆ ಮನವಿ

ಅಪಪ್ರಚಾರ ಮತ್ತು ಸುಳ್ಳು ಸುದ್ಧಿಯನ್ನು ಹಬ್ಬಿಸಿ ಸಮಾಜದ ಶಾಂತಿ ನೆಮ್ಮದಿಗೆ ಭಂಗ ತರುತ್ತಿರುವ ಯ್ಯೂಟ್ಯೂಬರ್ ಗಳ ವಿರುದ್ಧ ಮತ್ತು ಯ್ಯೂಟ್ಯೂಬ್ ಚ್ಯಾನಲ್ ಗಳ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮವನ್ನು ಕೈಗೊಳ್ಳುವಂತೆ ಸರ್ಕಾರಕ್ಕೆ ಆಗ್ರಹ

SIT ರಚಿಸಿದಕ್ಕೆ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ ಮತ್ತು ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಲು ನಿರ್ಣಯ.

ಧರ್ಮಸ್ಥಳ ಮತ್ತು ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಸಾಮಾಜಿಕ ಜಾಲತಾಣ ಮೂಲಕ ನಡೆಯುತ್ತಿರುವ ಸುಳ್ಳು ಪ್ರಚಾರಕ್ಕೆ ಖಂಡನೆ‌

ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಘಾಸಿ ಮಾಡುವ ಹೇಳಿಕೆಯನ್ನು ನೀಡುತ್ತಿರುವ ವ್ಯಕ್ತಿಗಳ ವಿರುದ್ಧ ಮತ್ತು ಅವರ ಹಿಂದೆ ನಿಂತು ಅವರಿಗೆ ಸಹಕಾರ ನೀಡುತ್ತಿರುವ ವ್ಯಕ್ತಿ,ಸಂಘ ಸಂಸ್ಥೆಗಳ ವಿರುದ್ಧ ಸರಕಾರ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳುವಂತೆ ಈ ಸಭೆಯ ಮೂಲಕ ಒತ್ತಾಯ.

ಶ್ರದ್ದಾ ಕೇಂದ್ರಗಳ ವಿರುದ್ಧ, ಧಾರ್ಮಿಕ ನಂಬಿಕೆಗಳ ವಿರುದ್ಧ ಮತ್ತು ಧಾರ್ಮಿಕ ಮುಖಂಡರ ವಿರುದ್ಧ ವ್ಯವಸ್ಥಿತ ಷಡ್ಯಂತ್ರಗಳು ಮುಂದಿನ ದಿನಗಳಲ್ಲಿ ನಡೆದರೆ ಎಲ್ಲಾ ಧಾರ್ಮಿಕ ಮುಖಂಡರು ಸಂಘಟಿತರಾಗಿ, ಸಮರ್ಥ ಯೋಜನೆಯನ್ನು ರೂಪಿಸಿ, ಅದರ ವಿರುದ್ಧ ಹೋರಾಡಲು ನಿರ್ಣಯ.

ಸಂಘಟನಾ ದೃಷ್ಟಿಯಿಂದ ಈ ಧರ್ಮ ಜಾಗೃತಿ ಸಮಿತಿಯನ್ನು ಇನ್ನಷ್ಟು ಬಲಪಡಿಸಿ ವರ್ಷಕ್ಕೆ ಒಂದು ಬಾರಿಯಾದರೂ ಈ ರೀತಿಯ ಸಮಾವೇಶವನ್ನು ಆಯೋಜಿಸಿ ಸೂಕ್ತ ಕಾರ್ಯಯೋಜನೆಗಳನ್ನು ರೂಪಿಸಲು ನಿರ್ಣಯ.

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ ಡಿ ವೀರೇಂದ್ರ ಹೆಗ್ಗಡೆಯವರೊಂದಿಗೆ ದೃಢವಾಗಿ ನಿಂತು ಧರ್ಮ ಸಂರಕ್ಷಣೆಯನ್ನು ಮಾಡಲು ಕಟಿಬದ್ಧರಾಗಿರುತ್ತೇವೆ ಎಂಬ ತೀರ್ಮಾನ ಕೈಗೊಳ್ಳಲಾಗಿದೆ.

Related Articles

Back to top button
error: Content is protected !!