ಇತರೆ

ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಹೋಗುವಾಗ ಆಟೋ ಪಲ್ಟಿ: ಮಗು ಸಾವು, 5 ಮಂದಿಗೆ ಗಾಯ

Views: 55

ಕನ್ನಡಕ ರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಮಗು ಸಾವನ್ನಪ್ಪಿದ್ದು 5 ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಹೊಕ್ಕಿಲ ನರ್ಜೆ ಕ್ರಾಸ್ ಬಳಿ ನ.16 ರಂದು ರಾತ್ರಿ ನಡೆದಿದೆ.

ನಾವೂರು ಕಡೆಯಿಂದ ಮಕ್ಕಳನ್ನು ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಕರೆದುಕೊಂಡು ಹೋಗುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಮಗು ಸೇರಿದಂತೆ ಆಟೋದಲ್ಲಿ ಮಕ್ಕಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ . ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಪರಿಣಾಮ ತಲೆಯ ಭಾಗಕ್ಕೆ ಗಂಭೀರ ಗಾಯವಾಗಿದ್ದ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಎಂಬುವರ ಪುತ್ರ ತನ್ವಿತ್ (12) ನ್ನು ತಕ್ಷಣ ಸ್ಥಳೀಯ ನಿವಾಸಿಗಳು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಚಿಕಿತ್ಸೆಗೆ ಸ್ಪಂದಿಸದೆ ಮಗು ಸಾವನಪ್ಪಿದೆ. ಇನ್ನುಳಿದ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!