ಕರಾವಳಿ

ಧರ್ಮಸ್ಥಳ ಸಮಾಧಿ ಶೋಧ ತನಿಖೆಗೆ ಸುಳ್ಳು ಮಾಹಿತಿ ಪ್ರಸಾರ ಆರೋಪ: ವಕೀಲರ ವಿರುದ್ದ ಪ್ರಕರಣ ದಾಖಲು

Views: 94

ಕನ್ನಡ ಕರಾವಳಿ ಸುದ್ದಿ: ಧರ್ಮಸ್ಥಳದಲ್ಲಿ ಶವ ಹೂತಿಡಲಾಗಿದೆ ಎಂಬ ದೂರಿಗೆ ಸಂಬಂಧಿಸಿ ಎಸ್‌ಐಟಿ ನಡೆಸುತ್ತಿದ್ದ ಸಮಾಧಿ ಶೋಧ ತನಿಖೆಗೆ ಸಂಬಂಧಿಸಿ ಸುಳ್ಳು ಮಾಹಿತಿ ಪ್ರಸಾರ ಮಾಡಿದ ಆರೋಪದ ಹಿನ್ನೆಲೆಯಲ್ಲಿ ವಕೀಲ ಮಂಜುನಾಥ ಎನ್‌. ಎಂಬವರ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೆಳ್ತಂಗಡಿ ತಾಲೂಕು ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ಎಂಬವರು ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಂಜುನಾಥ್, ಎಸ್‌ಐಟಿ ನಡೆಸುತ್ತಿದ್ದ ಮೃತದೇಹಗಳ ಉತ್ಪನನ ಪ್ರಕ್ರಿಯೆಗೆ ಸಂಬಂಧಿಸಿ ಜು.30 ರಂದು ತಾನು ಓರ್ವ ವಕೀಲನಾಗಿ, ಸಾರ್ವಜನಿಕರ ನೆಮ್ಮದಿಗೆ ದಕ್ಕೆಯಾಗುವಂತಹ ಹಾಗೂ ಭಯವುಂಟು ಮಾಡುವಂತಹ ಅನಧಿಕೃತ ಮಾಹಿತಿಗಳನ್ನು ಒಳಗೊಂಡಿರುವ ಸುಳ್ಳು ಪತ್ರಿಕಾ ಪ್ರಕಟಣೆಯನ್ನು ಪ್ರಸಾರ ಮಾಡಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗುವಂತೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Related Articles

Back to top button