ಇತರೆ

ಧರ್ಮಸ್ಥಳ ಸೌಜನ್ಯಅತ್ಯಾಚಾರ ಕೊಲೆ ಕೇಸ್: ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Views: 143

ಕನ್ನಡ ಕರಾವಳಿ ಸುದ್ದಿ:2012ರಲ್ಲಿ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಕೊಲೆ ಕೇಸ್ ಗೆ ಸಂಬಂಧಿಸಿದಂತೆ 14 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿರುವ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.

ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಸಮ್ಮತಿ ಸೂಚಿಸಿದೆ. ಅಲ್ಲದೆ, ಯಾವ ಮಾದರಿಯ ತನಿಖೆ ನಡೆಸಬೇಕು ಎಂಬ ಕುರಿತು ಅಂತಿಮ ಆದೇಶವನ್ನು ಕಾಯ್ದಿರಿಸಿದೆ.

ಅಂದಿನಿಂದಲೂ ಪ್ರಕರಣವನ್ನು ಸಮರ್ಪಕ ತನಿಖೆ ನಡೆದಿಲ್ಲ. ಘಟನೆ ನಡೆದು 14 ವರ್ಷ ಕಳೆದರೂ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಿಲ್ಲ. ಆದ್ದರಿಂದ, ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ಮೂಲಕ ಅಥವಾ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಕೋರಿ ಸೌಜನ್ಯ ಅವರ ತಾಯಿ ಕುಸುಮಾವತಿ ಅವರು ಅರ್ಜಿ ಸಲ್ಲಿಸಿದ್ದರು.

ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಿಚಾರಣೆ ನಡೆಸಿದೆ. ಪ್ರಕರಣದ ಸಂವೇದನಾಶೀಲತೆ, ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿರುವ ಸುಪ್ರೀಂಕೋರ್ಟ್, ಮರುತನಿಖೆಗೆ ತಾತ್ವಿಕ ಒಪ್ಪಿಗೆ ಸೂಚಿಸಿದೆ. ತನಿಖೆಯ ರೂಪುರೇಷೆ, ತನಿಖೆ ನಡೆಸುವ ಸಂಸ್ಥೆ ಹಾಗೂ ಅದರ ವ್ಯಾಪ್ತಿಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಅಂತಿಮ ಆದೇಶ ಪ್ರಕಟಿಸುವ ಸಾಧ್ಯತೆಯಿದೆ.

 

 

Related Articles

Back to top button
error: Content is protected !!