ಸಾಂಸ್ಕೃತಿಕ

ನಟಿ ಸಂಜನಾ, ರಾಗಿಣಿ ಡ್ರಗ್ಸ್ ಪ್ರಕರಣ ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ

Views: 17

ಕನ್ನಡ ಕರಾವಳಿ ಸುದ್ದಿ: ಸ್ಯಾಂಡಲ್‌ವುಡ್ ನಲ್ಲಿ ಭಾರೀ ಸಂಚಲನ ಸೃಷ್ಟಿಸಿದ್ದ ಡ್ರಗ್ಸ್ ಪ್ರಕರಣ ನಟಿ ಸಂಜನಾ ರಾಗಿಣಿ ಮತ್ತೆ ಹೆಗಲೇರಿದೆ.

ಸಿಸಿಬಿಯಿಂದ  ನಟಿಯರಿಗೆ ಶಾಕ್ ನೀಡಿದ್ದು, ಹೈಕೋರ್ಟ್ ಆದೇಶ ರದ್ದು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಡ್ರಗ್ಸ್ ಕೇಸ್‌ನನಲ್ಲಿ ತಮ್ಮ ಮೇಲಿರವ ಪ್ರಕರಣ ರದ್ದು ಮಾಡುವಂತೆ ನಟಿಯರಾದ ಸಂಜನಾ ಮತ್ತು ರಾಗಿಣಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಂತೆಯೇ ನಟಿ ಸಂಜನಾ ಮತ್ತು ರಾಗಿಣಿ ಎಫ್‌ಐಆರ್ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿತ್ತು. ಎಫ್‌ಐಆರ್ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಸಿಬಿ ಮೇಲ್ಮನವಿ ಅರ್ಜಿ ಸಲ್ಲಿಸಿದೆ.

ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸಂಜನಾ ಗಲ್ರಾನಿ, ರಾಗಿಣಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಸಿಸಿಬಿಯಿಂದ ನಟಿಯರು ಸೇರಿದಂತೆ ಡ್ರಗ್ಸ್ ಪೆಡ್ಲರ್‌ಗಳ ಬಂಧನವಾಗಿತ್ತು. ಸಂಜನಾ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ಏಕ ಸದಸ್ಯ ಪೀಠದಿಂದ ಎಫ್ಐಆರ್ ರದ್ದುಗೊಳಿಸಲಾಗಿತ್ತು.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿ ಕಳೆದ 2024 ಜೂನ್ 24ರಂದು ಹೈಕೋರ್ಟ್ ಬಿಡುಗಡೆಗೊಳಿಸಿ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಆರೆಸ್ಟ್ ಮಾಡಿದ್ದರು. ಜಾಮೀನಿನ ಮೇಲೆ ನಟಿ ಸಂಜನಾ ಜೈಲಿನಿಂದ ಹೊರಗಡೆ ಬಂದಿದ್ದರು. ಹೀಗಾಗಿ ನಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಸಭೆ ನಡೆಸಿ ಸರ್ಕಾರದ ಮಟ್ಟದಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

 

Related Articles

Back to top button