ಸಾಂಸ್ಕೃತಿಕ

ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

Views: 39

ಕನ್ನಡ ಕರಾವಳಿ ಸುದ್ದಿ:ಭಾರತೀಯ ಚಿತ್ರರಂಗಕ್ಕೆ ನೀಡಿದ ಅಮೋಘ ಕೊಡುಗೆಗಾಗಿ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರು 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಮತ್ತು ಪೀಳಿಗೆಗಳಿಗೆ ಸ್ಫೂರ್ತಿ ನೀಡಿದ ಶ್ರೇಷ್ಠ ಸಿನಿಮಾ ಪ್ರಯಾಣಕ್ಕಾಗಿ ಅನಂತ್ ನಾಗ್ ಅವರಿಗೆ 2024 ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ.

2026ರ ಸೆಪ್ಟೆಂಬರ್ 22ರಂದು ಗುಜರಾತ್‌ನ ಏಕ್ತಾ ನಗರದಲ್ಲಿ ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಪ್ರಧಾನಿ ಮೋದಿ ಅಭಿನಂದನೆ:ಕನ್ನಡದ ಮೇರು ನಟನಿಗೆ ಪ್ರಶಸ್ತಿ ಘೋಷಣೆಯಾದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ದಂತಕಥೆ ಅನಂತ್ ನಾಗ್ ಅವರಿಗೆ ಅಭಿನಂದನೆಗಳು. ಹಲವು ದಶಕಗಳಿಂದ, ಅವರ ಅಭಿನಯ, ಬಹುಮುಖ ಪ್ರತಿಭೆ ಮತ್ತು ಭಾರತೀಯ ಚಿತ್ರರಂಗದಲ್ಲಿ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಅಳಿಸಲಾದ ಗುರುತಾಗಿದೆ. ಅವರು ಮಾಡಿದ ಎಲ್ಲ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಈ ಪ್ರಶಸ್ತಿ ಅವರಿಗೆ ಘೋಷಣೆಯಾಗಿದ್ದು ಒಬ್ಬ ವಿಶಿಷ್ಟ ಕಲಾವಿದನಿಗೆ ಸಿಕ್ಕ ನಿಜವಾದ ಗೌರವ ಎಂದು ಅಭಿಪ್ರಾಯಪಟ್ಟಿದ್ದಾರೆ.

Related Articles

Back to top button
error: Content is protected !!