ಇತರೆ

ನಡುರಸ್ತೆಯಲ್ಲೇ ರೌಡಿಶೀಟ‌ರ್ ನನ್ನು ಅಡ್ಡಗಟ್ಟಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ 

Views: 42

ಕನ್ನಡ ಕರಾವಳಿ ಸುದ್ದಿ: ರೌಡಿಶೀಟ‌ರ್ ವೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಘಟನೆ ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಬಳಿ ನಡೆದಿದೆ.

ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿದ್ದ ಮೂಲತಃ ಹಾಸನ ನಿವಾಸಿ ಮಂಜೇಶ್ ಕೊಲೆಯಾದ ವ್ಯಕ್ತಿ.

ಘಟನೆಯ ವಿವರ: ಮಂಜೇಶ್ ಕೆಲವು ಸಮಯದಿಂದ ಬೆಂಗಳೂರಿನಲ್ಲಿ ನೆಲೆಸಿದ್ದು, ಅಲ್ಲಿನ ಪೊಲೀಸ್ ಠಾಣೆಯೊಂದರಲ್ಲಿ ರೌಡಿಶೀಟರ್ ಆಗಿ ದಾಖಲಾಗಿದ್ದನು. ಶನಿವಾರ ವೈಯಕ್ತಿಕ ಅಥವಾ ನ್ಯಾಯಾಲಯದ ಕೆಲಸದ ನಿಮಿತ್ತ ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಬಳಿ ಬಂದಿದ್ದ ವೇಳೆ ಹೊಂಚು ಹಾಕಿ ಕುಳಿತಿದ್ದ ಹಂತಕರು ಈ ಕೃತ್ಯ ಎಸಗಿದ್ದಾರೆ.

ನಡುರಸ್ತೆಯಲ್ಲೇ ಮಂಜೇಶ್ ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಗೈದಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಹಾಸನ ನಗರ ಪೊಲೀಸರು, ತನಿಖೆ ಕೈಗೆತ್ತಿಕೊಂಡಿದ್ದಾರೆ. ನ್ಯಾಯಾಲಯ ಹಾಗೂ ಸುತ್ತಮುತ್ತಲಿನ ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

Related Articles

Back to top button
error: Content is protected !!