ಇತರೆ

ನದಿಗೆ ಹಾರಿ ಮಹಿಳೆ ಆತ್ಮಹತ್ಯೆ; ಶವ ಹುಡುಕಾಟಕ್ಕೆ ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಸಾವು 

Views: 67

ಕನ್ನಡ ಕರಾವಳಿ ಸುದ್ದಿ: ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅವರ ಮೃತದೇಹ ಹೊರತೆಗೆಯಲು ಬಂದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘೋರ ದುರಂತವೊಂದು ಸೋಮವಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ನಡೆದಿದೆ.

ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್(35) ಎಂಬ ಮಹಿಳೆ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕವಿತಾ ಅವರು ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತಿ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಕವಿತಾ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹ ಹೊರತೆಗೆಯಲು ಮಾಲೂರಿನ ಮಂಜುನಾಥ್ ಎಂಬುವವರನ್ನು ಪೊಲೀಸರು ಕರೆಸಿದ್ದರು. ಆದರೆ ಮೃತದೇಹವನ್ನು ಹೊರತೆಗೆಯುವ ಸಂದರ್ಭದಲ್ಲಿ ಮಂಜುನಾಥ್ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

 

Related Articles

Back to top button
error: Content is protected !!