ಕರಾವಳಿ

ನನ್ನ ಜತೆ ಬಾ ಇಲ್ಲಾಂದ್ರೆ 24 ತುಂಡು ಮಾಡುವೆ: ಮೆಸೇಜ್ ಮಾಡಿ ಯುವತಿಗೆ ಬೆದರಿಕೆ; ಆರೋಪಿ ವಶಕ್ಕೆ 

Views: 228

ಸುರತ್ಕಲ್: ‘ನನ್ನ ಜತೆ ಸಹಕರಿಸು ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸುರತ್ಕಲ್ ಇಡ್ಯಾ ಅನ್ಯ ಸಮುದಾಯದ ನಿವಾಸಿ ಸಮೀಪದಲ್ಲೇ ವಾಸಿಸುವ ಯುವತಿಯೊಬ್ಬಳಿಗೆ ವಾಟ್ಸಪ್ ಮೆಸೇಜ್ ಮಾಡಿ ಬೆದರಿಕೆ  ಹಾಕಿದ್ದಾನೆ.

ಸುರತ್ಕಲ್ ಇಡ್ಯಾ ನಿವಾಸಿ, ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಮೆಸೆಜ್‌ ಮಾಡಿದ ಆರೋಪಿ ಎಂದು ತಿಳಿದು ಬಂದಿದೆ.

ಕಿರುಕುಳ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಓರ್ವನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಯುವತಿಯ ಸಹೋದರನಿಗೆ ವಾಟ್ಸಪ್ ಮೆಸೇಜ್ ಮಾಡಿ ಈ ಬೆದರಿಕೆ ಹಾಕಿದ್ದಾನೆ. ಯುವತಿಯ ಕುಟುಂಬ ಆತಂಕಗೊಂಡು ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಯುವಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

Related Articles

Back to top button
error: Content is protected !!