ಇತರೆ

ನನ್ನ ಸಾವಿಗೆ ಗಂಡ, ಅತ್ತೆ ಕಾರಣ ಎಂದು ಡೆತ್‌ ನೋಟ್ ಬರೆದಿಟ್ಟು,ವಿಡಿಯೋ ಮಾಡಿ ಮಗುವಿನೊಂದಿಗೆ ನದಿಗೆ ಹಾರಿ ಪ್ರಾಣ ಬಿಟ್ಟ ಮಹಿಳೆ

Views: 194

ಕನ್ನಡ ಕರಾವಳಿ ಸುದ್ದಿ : ಮನೆಯವರು ವರದಕ್ಷಿಣೆ ರೂಪದಲ್ಲಿ 100 ಗ್ರಾಂ ಚಿನ್ನ ನೀಡಿ ಮದುವೆ ಮಾಡಿ ಕೊಟ್ಟಿದ್ದರು. ದುರಂತ ಅಂದ್ರೆ ಆಕೆ ಪತಿ ಹಾಗೂ ಅತ್ತೆಯ ಕಿರುಕುಳಕ್ಕೆ ಬಲಿಯಾಗಿದ್ದಾಳೆ. ಜೊತೆಗೆ ಒಂದೂವರೆ ವರ್ಷದ ಮಗುವೂ ಪ್ರಾಣ ಬಿಟ್ಟಿದೆ. ಈ ಘಟನೆ ನಡೆದಿರೋದು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥಪುರ ಬಳಿ ನಡೆದಿದೆ..

29 ವರ್ಷದ ಮಹಾದೇವಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಮೊದಲ ಪತಿಯಿಂದ ವಿಚ್ಛೇದನ ಪಡೆದಿದ್ದ ಮಹಾದೇವಿ ಮೂರು ವರ್ಷಗಳ ಹಿಂದೆ ಕುಮಾರ್ ಎಂಬಾತನ ಜೊತೆ ಎರಡನೇ ವಿವಾಹವಾಗಿದ್ದರು. ಇತ್ತೀಚಿಗೆ ಪತ್ನಿ ಮೇಲೆ ಅನುಮಾನ ಪಡುತ್ತಿದ್ದ ಕುಮಾ‌ರ್, ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ಮಹಾದೇವಿ ಕಳೆದ ಹದಿನೈದು ದಿನಗಳ ಹಿಂದೆ ತವರು ಮನೆ ಸೇರಿದ್ದರು. ಆದರೂ ಸುಮ್ಮನಾಗದ ಪತಿ ಕುಮಾರ್, ಮಹಾದೇವಿಗೆ ಅಶ್ಲೀಲ ಮೆಸೇಜ್ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದನಂತೆ.

ಹಾಸನಕ್ಕೆ ಬಂದಿದ್ದ ಮಹಾದೇವಿಗೆ ಬಸ್ ನಿಲ್ದಾಣದಲ್ಲೇ ಕುಮಾರ್‌ ನಿಂದಿಸಿದ್ದನಂತೆ. ಇದರಿಂದ ಮನನೊಂದಿದ್ದ ಮಹಾದೇವಿ ನಂತರ ಹಾಸನ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು ಎನ್ನಲಾಗಿದೆ. ಬಳಿಕ ಡೆತ್‌ ನೋಟ್ ಬರೆದಿಟ್ಟು ಮಗುವಿನೊಂದಿಗೆ ವೀಡಿಯೋ ಮಾಡಿ ಮನೆಯಿಂದ ತೆರಳಿದ್ದು, ರಾಮನಾಥಪುರದ ಬಳಿಯ ಕಾವೇರಿ ನದಿಗೆ ಮಗುವಿನೊಂದಿಗೆ ಹಾರಿ ಪ್ರಾಣ ಬಿಟ್ಟಿದ್ದಾರೆ.

ನದಿಗೆ ಹಾರುವುದಕ್ಕೂ ಮುನ್ನ ಮಹಾದೇವಿ ವೀಡಿಯೋ ಮಾಡಿದ್ದಾರೆ. ಪತಿಯ ನಿಂದನೆ ಸಹಿಸಲು ಆಗುತ್ತಿಲ್ಲ. ನಾನು ಬದುಕಿರುವುದರಿಂದ ಅವನಿಗೆ ತೊಂದರೆ. ನನ್ನ ಸಾವಿಗೆ ನನ್ನ ಗಂಡ, ನನ್ನ ಅತ್ತೆ ಕಾರಣ. ಯಾವುದು ಬೇಡ, ಹೋರಾಟ ಮಾಡಲು, ಓಡಾಡಲು ಆಗುತ್ತಿಲ್ಲ. ನಾನು ಇದ್ದರೆ ತಮ್ಮ, ಅಪ್ಪ-ಅಮ್ಮನಿಗೂ ತೊಂದರೆ. ಬಾಯಿಗೆ ಬಂದಂತೆ ಬಯ್ಯುತ್ತಾನೆ. ಮೂರು ವರ್ಷದಿಂದ ನರಕ ಕೊಟ್ಟಿದ್ದಾನೆ. ಪೊಲೀಸರು ಹೇಳುವಷ್ಟು ಹೇಳಿದ್ದಾರೆ. ನನ್ನ ತಮ್ಮ, ಅಪ್ಪ, ಅಮ್ಮ ಎಲ್ಲರಿಗೂ ಜೀವ ಬೆದರಿಕೆ ಹಾಕಿದ್ದಾನೆ. ನನ್ನಿಂದ ಅವರ ಜೀವನ ಏಕೆ ಹಾಳಾಗಬೇಕು? ಮಗು ನನಗೆ ಹುಟ್ಟಿಲ್ಲ ಅಂತಾನೆ. ಇದನ್ನೆಲ್ಲಾ ಕೇಳಿಕೊಂಡು ಬದುಕಲು ಆಗಲ್ಲ, ಈ ಜೀವನವೇ ಬೇಡ ನನಗೆ ಎಂದು ಹೇಳಿದ್ದಾರೆ.

Related Articles

Back to top button
error: Content is protected !!