ಜನಮನ

ನವರಾತ್ರಿ ಹಬ್ಬ ಮುಗಿಯುವವರೆಗೂ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Views: 95

ಕನ್ನಡ ಕರಾವಳಿ ಸುದ್ದಿ: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದೆ. ಅಕ್ಟೋಬರ್ 2 ನವರಾತ್ರಿ ಹಬ್ಬ ಮುಗಿಯುವವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಅದರಲ್ಲಿಯೂ ಉತ್ತರ ಕರ್ನಾಟಕ ಭಾಗದಲ್ಲಿ ಇನ್ನೆರಡು ದಿನ ಭಾರಿ ಮಳೆಯಾಗಲಿದೆ. 8 ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಕಲಬುರಗಿ, ಬಾಗಲಕೋಟೆ, ಯಾದಗಿರಿ, ಬೀದರ್, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳುರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಧಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ತುಮಕೂರು, ರಾಮನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

Related Articles

Back to top button
error: Content is protected !!