ಜನಮನ

ನಾನೇ ಡಿ.ಕೆ.ಸುರೇಶ್ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಶಿಕ್ಷಕಿಯ ಬಂಧನ 

Views: 289

ಕನ್ನಡ ಕರಾವಳಿ ಸುದ್ದಿ; ನಾನೇ ಡಿ.ಕೆ.ಸುರೇಶ್ ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆಯನ್ನ ಪೊಲೀಸರು ಬಂಧಿಸಿದ್ದಾರೆ. ರಾಮನಗರ ಸೆನ್ ಠಾಣೆಯ ಪೊಲೀಸರು ಮಹಿಳೆಯನ್ನು ಹುಡುಕಿ ಬಂಧಿಸಿದ್ದಾರೆ.

ಮಂಡ್ಯ ಜಿಲ್ಲಾ ಕಾರಾಗೃಹಕ್ಕೆ ಮಹಿಳೆಯನ್ನು ಶಿಫ್ಟ್ ಮಾಡಲಾಗಿದೆ. ಡಿಕೆ ಸುರೇಶ್ ಬಗ್ಗೆ ಮಾತಾಡಿದ ವಿಡಿಯೋ ವೈರಲ್ ಆಗ್ತಿದ್ದಂತೆಯೇ ಆಕೆಯನ್ನು ಅರೆಸ್ಟ್ ಮಾಡಲಾಗಿದೆ.

ಕನಕಪುರದ ದೊಡ್ಡಾಲಹಳ್ಳಿ ಗ್ರಾಮದ ಈ ಮಹಿಳೆ ಮೈಸೂರಿನಲ್ಲಿ ವಾಸವಾಗಿದ್ರು. ಈ ಮಹಿಳೆ ಅಕ್ಕಪಕ್ಕದವರ ಜೊತೆಗೆ ಗಲಾಟೆ ಮಾಡಿಕೊಂಡಿದ್ದಳು. ವೃತ್ತಿಯಲ್ಲಿ ಶಿಕ್ಷಕಿಯಾಗಿರುವ ಈಕೆ ಅಕ್ಕಪಕ್ಕದ ಮನೆಯವರ ಬಳಿ ಗಲಾಟೆ ಮಾಡುತ್ತಿದ್ದರು ಎಂದು ನಿವಾಸಿಗಳು ಹೇಳಿದ್ದಾರೆ. ಮಹಿಳೆಯನ್ನು ಬಂಧಿಸಿದ ಪೊಲೀಸರು ಮಂಡ್ಯ ಜೈಲಿಗೆ ಕಳುಹಿಸಿದ್ದಾರೆ.

Related Articles

Back to top button
error: Content is protected !!