ಇತರೆ

ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟು ಉಪ ತಹಸೀಲ್ದಾರ್ ಆತ್ಮಹತ್ಯೆ

Views: 51

ಕನ್ನಡ ಕರಾವಳಿ ಸುದ್ದಿ: ಡೆತ್ ನೋಟ್ ಬರೆದಿಟ್ಟು ಉಪ ತಹಸೀಲ್ದಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಬಿಎಂ ರಸ್ತೆಯ ಲಾಡ್ಜ್‌ನಲ್ಲಿ ನಡೆದಿದೆ.

ಮೈಸೂರು ಜಿಲ್ಲೆಯ ಸಾಲಿಗ್ರಾಮದಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ತಿಮ್ಮಯ್ಯ (52) ಆತ್ಮಹತ್ಯೆ ಮಾಡಿಕೊಂಡವರು, ಕೊಡಗು ಜಿಲ್ಲೆಯ ತಿಮ್ಮಯ್ಯ ಅವರು ಹಾಸನದ ಚನ್ನಪಟ್ಟಣ ಬಡಾವಣೆಯ ದ್ಯಾವಮ್ಮ ಬಡಾವಣೆಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಮೂರು ವರ್ಷಗಳ ಹಿಂದೆ ಹಾಸನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ನಿನ್ನೆ ಬೆಳಿಗ್ಗೆ ಬಿಎಂ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಕೊಠಡಿಯೊಂದನ್ನು ಬಾಡಿಗೆಗೆ ಪಡೆದಿದ್ದು, ಸಂಜೆಯಾದರೂ ಕೊಠಡಿ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡ ಲಾಡ್ಜ್ ಸಿಬ್ಬಂದಿ ರಾತ್ರಿ ಸುಮಾರು 8:30ರ ವೇಳೆಗೆ ಬಾಗಿಲಿನ ಬೀಗ ಒಡೆದು ಒಳಗೆ ಪ್ರವೇಶಿಸಿದಾಗ ಅವರು ನೇಣು ಬಿಗಿದುಕೊಂಡಿರುವುದು ಪತ್ತೆಯಾಗಿದೆ.

ಆತಹತ್ಯೆಗೂ ಮುನ್ನ ತಿಮ್ಮಯ್ಯ ಅವರು ನಾಲ್ಕು ಪುಟಗಳ ಡೆತ್‌ನೋಟ್ ಬರೆದಿಟ್ಟಿರುವುದು ಬೆಳಕಿಗೆ ಬಂದಿದೆ.

ಡೆತ್‌ನೋಟ್‌ನಲ್ಲಿರುವ ಮಾಹಿತಿಯ ಆಧಾರದ ಮೇಲೆ ಬಡಾವಣೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ಕೈಗೊಂಡಿದ್ದಾರೆ.

Related Articles

Back to top button
error: Content is protected !!