ಕರಾವಳಿ

ನಾಲ್ವರು ಕೊಲೆ ಪ್ರಕರಣ: ಮಹಜರು ವೇಳೆ ಹತ್ಯೆ ಆರೋಪಿಯ ಮೇಲೆ ದಾಳಿಗೆ ಯತ್ನ : ಪೊಲೀಸರಿಂದ ಲಾಠಿಚಾರ್ಜ್

Views: 0

ಉಡುಪಿ: ನೇಜಾರು ತೃಪ್ತಿ ಲೇಔಟ್‌ ನಲ್ಲಿ ನಡೆದ ತಾಯಿ, ಮಕ್ಕಳ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಯನ್ನು ಪೊಲೀಸರು ಸ್ಥಳ ಮಹಜರು ನಡೆಸಲು ಕರೆ ತಂದ ವೇಳೆ ಸ್ಥಳದಲ್ಲಿ ಸೇರಿದ್ದ ಆಕ್ರೋಶಿತರ ಗುಂಪು ಆರೋಪಿಗೆ ಹಲ್ಲೆ ನಡೆಸಲು ಯತ್ನಿಸಿದ ಘಟನೆ ನಡೆದಿದ್ದು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಮಹಜರು ನಡೆಸುವ ವೇಳೆ ಆರೋಪಿಯನ್ನು ತಮ್ಮ ಕೈಗೆ ಒಪ್ಪಿಸುವಂತೆ ಒತ್ತಾಯಿಸಿದ್ದ ಆಕ್ರೋಶಿತ ಗುಂಪು, ಆತನಿಗೆ ಬದುಕುವ ಹಕ್ಕು ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಧಿಕ್ಕಾರ ಕೂಗಿದರು.

ಮಹಜರು ಪ್ರಕ್ರಿಯೆ ಮುಗಿಸಿ ಆರೋಪಿಯನ್ನು ವಾಪಾಸು ಕರೆದುಕೊಂಡು ಹೋಗುವ ವೇಳೆ ನೂರಾರು ಸಂಖ್ಯೆಯಲ್ಲಿದ್ದ ಆಕ್ರೋಶಿತ ಗುಂಪೊಂದು ಆರೋಪಿಯ ಮೇಲೆ ದಾಳಿಗೆ ಯತ್ನಿಸಿತು, ಈ ವೇಳೆ ಪೊಲೀಸರು ಲಾಠಿ ಚಾರ್ಜ್ ನಡೆಸಿ ಗುಂಪನ್ನು ಚದುರಿಸಿದರು. ಬಳಿಕ ಆಕ್ರೋಶಿತ ಗುಂಪು ಲಾಠಿ ಚಾರ್ಜ್ ಖಂಡಿಸಿ ರಸ್ತೆ ತಡೆ ನಡೆಸಿದರು.

Related Articles

Back to top button