ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟಿ ಕತ್ರಿನಾ ಸರ್ಪ ಸಂಸ್ಕಾರ

Views: 76
ಕನ್ನಡ ಕರಾವಳಿ ಸುದ್ದಿ: ಬಾಲಿವುಡ್‌ನ ಖ್ಯಾತ ನಟಿ ಕತ್ರೀನಾ ಕೈಫ್ ತೀರ್ಥಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಆಗಮಿಸಿದ್ದಾರೆ.
ನಾಳೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕತ್ರೀನಾ ಕೈಫ್ ಅವರು ದೇವರ ದರ್ಶನ ಮಾಡಿದ್ದು, ಸರ್ಪಸಂಸ್ಕಾರ ಪೂಜೆಯಲ್ಲಿ ಭಾಗಿಯಾಗಲಿದ್ದಾರೆ. ಇಂದು ಕುಕ್ಕೆ ಸುಬ್ರಹ್ಮಣ್ಯದಲ್ಲೆ ಉಳಿದುಕೊಳ್ಳಲಿರುವ ಬಾಲಿವುಡ್ ನಟಿ ನಾಳೆ ಸರ್ಪ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಕತ್ರೀನಾ ಕೈಫ್ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದು, ನಾಳೆಯ ಸರ್ಪ ಸಂಸ್ಕಾರ ಕಾರ್ಯಕ್ರಮಕ್ಕೆ ನೋಂದಾಯಿಸಿದ್ದಾರೆ. ಈ ಸರ್ಪ ಸಂಸ್ಕಾರವನ್ನು ಸಾಂಪ್ರದಾಯಿಕವಾಗಿ ಕ್ಷೇತ್ರದ ವಿಧಿವಿಧಾನಗಳಂತೆ ನೆರವೇರಿಸಲಾಗುತ್ತದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ. ಇಂದು ಮಾಸ್ಕ್ ಧರಿಸಿ, ತಲೆಗೆ ದುಪ್ಪಟ್ಟ ಹಾಕಿಕೊಂಡು ಅವರು ದೇವರ ದರ್ಶನದಲ್ಲಿ ಭಾಗಿಯಾಗಿದ್ದಾರೆ ಎಂದು ವರದಿಯಾಗಿದೆ.
ಇತ್ತಿಚೆಗೆ ಕತ್ರಿನಾ ಕೈಫ್ ಕುಂಭಮೇಳದಲ್ಲಿ ಪಾಲ್ಗೊಂಡಿದ್ದರು. “ಇಲ್ಲಿಗೆ ಬರಲು ಸಾಧ್ಯವಾಗಿರುವುದು ನನ್ನ ಅದೃಷ್ಟ. ನನಗೆ ನಿಜವಾಗಿಯೂ ಸಂತಸವಾಗುತ್ತಿದೆ. ಇದು ಬಹಳ ಸುಂದರವಾದ ಸ್ಥಳ. ಕುಂಭಮೇಳದ ಅನುಭವ ಪಡೆಯಲು ಈಗಷ್ಟೇ ಆರಂಭಿಸಿದ್ದೇನೆ. ನಾನು ಪುಣ್ಯವಂತೆ. ಇಡೀ ದಿನವನ್ನು ಇಲ್ಲಿ ಕಳೆಯಲು ನಾನು ಉತ್ಸುಕಳಾಗಿದ್ದೇನೆʼʼ ಎಂದು ಅವರು ಭಾವುಕರಾಗಿ ಹೇಳಿದ್ದರು.