ಶಿಕ್ಷಣ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ 

Views: 325

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಂಗಳವಾರ ತಿಳಿಸಿದೆ.

ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ನಡೆಯಲಿದ್ದು, ಬಳಿಕ 11 ಗಂಟೆಗೆ  ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಫಲಿತಾಂಶವನ್ನು karresults.nic.in ಅಥವಾ pue.kar.nic ಅಧಿಕೃತ ವೆಬ್ ಸೈಟ್ ನಲ್ಲಿ ನಾಳೆ ಬೆಳಗ್ಗೆ 11 ಗಂಟೆಯ ನಂತರ ವೀಕ್ಷಿಸಬಹುದು.

 

Related Articles

Back to top button