ಆರೋಗ್ಯ
ನಾಳೆ ರಾಜ್ಯದಾದ್ಯಂತ ಖಾಸಗಿ ಆಸ್ಪತ್ರೆಗಳ ಹೊರರೋಗಿ ಸೇವೆ ವಿಭಾಗ ಬಂದ್

Views: 143
ಬೆಂಗಳೂರು: ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ಮತ್ತು ಪ್ರತಿಭಟಿಸಿ ಕರ್ನಾಟಕದಾದ್ಯಂತ ಶನಿವಾರ ಹೊರರೋಗಿ ಸೇವೆ ವಿಭಾಗ (ಒಪಿಡಿ) ಬಂದ್ ಮಾಡುವುದಾಗಿ ವೈದ್ಯರು ಘೋಷಿಸಿದ್ದಾರೆ.
ಈ ಮಧ್ಯೆ, ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದು, ವೈದ್ಯರ ಮುಷ್ಕರದ ಕಾರಣ ರೋಗಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಮುಖ್ಯ ಕಾರ್ಯದರ್ಶಿ ಜತೆಗೂ ಮಾತನಾಡಿದ್ದೇನೆ. ಏನೆಲ್ಲ ಕ್ರಮ ಕೈಗೊಳ್ಳಲು ಸಾಧ್ಯವಿದೆ ಎಂದು ಚರ್ಚಿಸಲು ಹೇಳಿದ್ದೇನೆ.ಸಾರ್ವಜನಿಕರಿಗೆ ತೊಂದರೆಯಾಗಬಾರದು. ಎಲ್ಲಾ ಅಸೋಸಿಯೇಷನ್ ಸಭೆ ಕರೆದು ಕ್ರಮದ ಬಗ್ಗೆ ಚರ್ಚಿಸುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.