ಇತರೆ

ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು 

Views: 27

ಕನ್ನಡ ಕರಾವಳಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಅಂಡಾರು ಕೊಂದ ಎಂಬಲ್ಲಿ ಶನಿವಾರ (ನ.21) ದಂದು ಸಂಭವಿಸಿದೆ.

ಅಪಘಾತದಲ್ಲಿ ವಾಹನ ಚಾಲಕ ಕಡ್ತಲ ಸೀತಾರಾಮ ರೈ (60) ಮೃತಪಟ್ಟಿದ್ದು, ವಾಹನದಲ್ಲಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಅಂಡಾರು ಕೊಂದಲಿಕೆ ಪರಿಸರದ ವಸಂತಿ, ಲೀಲಾವತಿ, ಶಾಲಿನಿ, ಶೋಭಾ, ಪ್ರೇಮ ಎಂಬವರಿಗೆ ಗಾಯವಾಗಿದ್ದು, ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಂಡಾರಿನಿಂದ ಕಾಡುಹೊಳೆ ಮಾರ್ಗವಾಗಿ ಕಡ್ತಲದ ಹಪ್ಪನಡ್ಕ ಸದಾನಂದ ಶೆಟ್ಟಿ ಎಂಬವರ ಅಡಿಕೆ ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕರೆದೊಯ್ಯಲು ಬರುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ವಾಹನ ಚಾಲನೆ ವೇಳೆ ಹೃದಯಾಘಾತದಿಂದ ವಾಹನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.ಅಜೆಕಾರು ಪೊಲೀಸರು ಪರಿಶೀಲನೆ ನಡೆಸಿದ್ದಾರೆ

Related Articles

Back to top button
error: Content is protected !!