ಇತರೆ
ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ನಜ್ಜುಗುಜ್ಜು, ಚಾಲಕ ಗಂಭೀರ

Views: 131
ಹಾಸನ: ಜಿಲ್ಲೆಯಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದು ಅನಾಹುತ ಸಂಭವಿಸಿದ ಘಟನೆ ಆಲೂರು ತಾಲೂಕಿನ ಸಿಂಗಾಪುರ ಬಳಿ ನಡೆದಿದೆ.
ದುರ್ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯವಾಗಿದೆ. ಚಾಲಕನ ಸ್ಥಿತಿ ಚಿಂತಾಜನಕ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯಾದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






