ನಿಶ್ಚಿತಾರ್ಥ ನಡೆಸಿ, ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ತಮ್ಮನನ್ನೇ ಮದುವೆಯಾದ ಅಕ್ಕ!
Views: 104
ಕನ್ನಡ ಕರಾವಳಿ ಸುದ್ದಿ : ಪ್ರೀತಿ ಎನ್ನುವುದು ಯಾರ ಮೇಲೆ ಬೇಕಾದರೂ ಹುಟ್ಟುತ್ತದೆ ಎಂಬುವುದಕ್ಕೆ ಸಾಕ್ಷಿಯಾಗುವಂತೆ ಚಿಕ್ಕಬಳ್ಳಾಪುರದಲ್ಲೊಂದು ವಿಚಿತ್ರ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಸಾವಕನಹಳ್ಳಿಯ ಶಶಿಕಲಾ (29), ಹೊಸಕೋಟೆ ತಾಲ್ಲೂಕಿನ ಹಳೆಊರಿನ ಪ್ರವೀಣ್ (24)ಎಂಬಾತನನ್ನು ಮದುವೆಯಾಗುವ ಮೂಲಕ ಸಮಾಜ ಮತ್ತು ಕುಟುಂಬದ ವಿರೋಧದ ನಡುವೆಯೂ ಒಂದಾಗಿದ್ದಾರೆ.
ಶಶಿಕಲಾ ಮತ್ತು ಪ್ರವೀಣ್ ಸಂಬಂಧಿಕರಾಗಿದ್ದು, ಶಶಿಕಲಾಳ ತಾಯಿಯ ತಂಗಿಯ ಮಗನೇ ಪ್ರವೀಣ್. ಅಂದರೆ, ಇವರಿಬ್ಬರು ಅಕ್ಕ-ತಮ್ಮನಾಗಬೇಕು. ಇವರ ಪ್ರೀತಿಯ ವಿಷಯ ತಿಳಿದ ಪೋಷಕರು, ಈ ಸಂಬಂಧ ಸಮಾಜದಲ್ಲಿ ಒಪ್ಪಿತವಲ್ಲ ಎಂದು ವಿರೋಧಿಸಿದ್ದರು.
ಶಶಿಕಲಾಗೆ ಬೇರೊಬ್ಬ ಹುಡುಗನೊಂದಿಗೆ ನಿಶ್ಚಿತಾರ್ಥ ನಡೆಸಿ ಇದೇ ಮೇ 29ಕ್ಕೆ ಮದುವೆ ದಿನಾಂಕವನ್ನೂ ನಿಗದಿಪಡಿಸಿದ್ದರು. ಆದರೆ ಮದುವೆಗೆ ಕೆಲವೇ ದಿನ ಬಾಕಿ ಇರುವಾಗ ಶಶಿಕಲಾ ಮನೆಯಿಂದ ಹೊರಬಂದು ಪ್ರವೀಣ್‌ನನ್ನು ಮದುವೆಯಾಗಿದ್ದಾಳೆ.
ಮದುವೆಯಾದ ಬಳಿಕ ಈ ಜೋಡಿ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮತ್ತು ಮಹಿಳಾ ಪೊಲೀಸ್ ಠಾಣೆಗೆ ಧಾವಿಸಿ ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ. ‘ನಾವು ಪರಸ್ಪರ ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ನಮ್ಮ ಪಾಡಿಗೆ ಬಿಟ್ಟು ಬಿಡಿ ಎಂದಿದ್ದಾರೆ.






