ಶಿಕ್ಷಣ

ನೇಶನಲ್ ಐಟಿಐ ಬಾರ್ಕೂರಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Views: 10

ಕನ್ನಡ ಕರಾವಳಿ ಸುದ್ದಿ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ದಿನಾಂಕ 30 -9- 2026 ಬುಧವಾರ ನೇಶನಲ್ ಐಟಿಐ ಬಾರ್ಕೂರು ಇಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರುಗಿತು . ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಚಾರ್ಯರಾದ ಶ್ರೀ ಭಾಸ್ಕರ್ ಉಪಾಧ್ಯಾಯ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆವರ್ಸೆ ಪ್ರೌಢಶಾಲೆಯ ಆಂಗ್ಲ ಭಾಷಾ ಶಿಕ್ಷಕರಾದ ಶ್ರೀಯುತ ಶಶಿಧರ ಶೆಟ್ಟಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸವಿಸ್ತಾರವಾಗಿ ಮಾಹಿತಿಯನ್ನು ನೀಡಿದರು.ಕಾರ್ಯಕ್ರಮದ ಉದ್ಘಾಟನೆಯನ್ನು ಜನಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀ ಪ್ರಕಾಶ್ ಶೆಟ್ಟಿ ನೆರವೇರಿಸಿದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಮೇಶ್ ಪಿ.ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕರಾದ ಶ್ರೀ ಸುಧಾಕರ್ ಶೆಟ್ಟಿಗಾರ ಅವರು ಸ್ವಾಗತಿಸಿ ಶ್ರೀಮತಿ ಅಶ್ವಿನಿ ಆಚಾರ್ಯ ಅವರು ಪ್ರಾರ್ಥನೆಗೈದರು. ಬ್ರಹ್ಮಾವರ ವಲಯ ಕೃಷಿ ಮೇಲ್ವಿಚಾರಕರಾದ ಶ್ರೀ ರಾಘವೇಂದ್ರ ಹಾಗೂ ಸೇವಾ ಪ್ರತಿನಿಧಿಗಳಾದ ಶ್ರೀಮತಿ ಶಾರದ ಹಾಗೂ ಶ್ರೀಮತಿ ದೇವಕಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Related Articles

Back to top button
error: Content is protected !!