ಜನಮನ

ನೋಡ ನೋಡುತ್ತಿದ್ದಂತೆ ವ್ಯಕ್ತಿಯೋರ್ವ ಬಸ್ಸಿನ ಹಿಂಬದಿ ಚಕ್ರಕ್ಕೆ ಸಿಲುಕಿ ಸಾವು.. ಅಸಲಿಗೆ ಆಗಿದ್ದೇನು?

Views: 0

ಚಾಮರಾಜನಗರ: ವ್ಯಕ್ತಿಯೋರ್ವ ಚಲಿಸುತ್ತಿದ್ದ ಬಸ್​ನ ಹಿಂಬದಿ ಚಕ್ರಕ್ಕೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ರಂಗಸ್ವಾಮಿ ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ರಂಗಸ್ವಾಮಿ ಎಂಬ ವ್ಯಕ್ತಿಯು ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ರಂಗಸ್ವಾಮಿ ಚಾಮರಾಜನಗರ ತಾಲೂಕಿನ ಯಲಕ್ಕೂರು ನಿವಾಸಿ. ಕೆಎಸ್​​ಆರ್​ಟಿಸಿ ಬಸ್​ನ ಹಿಂಬದಿಯ ಚಕ್ರಕ್ಕೆ ಬೀಳುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಚಾಮರಾಜನಗರ ಟೌನ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!