ಶಿಕ್ಷಣ
ನ.28ಕ್ಕೆ ಉಡುಪಿ ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ರಜೆ: ಜಿಲ್ಲಾಡಳಿತ ಘೋಷಣೆ
Views: 116
ಕನ್ನಡ ಕರಾವಳಿ ಸುದ್ದಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಡುಪಿಗೆ ಆಗಮನದ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸ ಆಗಲಿರುವುದರಿಂದ ನ.28ಕ್ಕೆ ಉಡುಪಿ ನಗರ, ಮಲ್ಪೆ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.
ಪ್ರಧಾನಿ ಮೋದಿಯವರ ಆಗಮನದ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ವಿಶೇಷ ಭದ್ರತ ಪಡೆ(ಎಸ್‌ಪಿಜಿ)ಯಿಂದ ನಗರದ ವಿವಿಧೆಡೆ ಸುರಕ್ಷ ಕ್ರಮಗಳ ಪರಿಶೀಲನೆ ನಡೆಯಿತು.






