ಪಂಚತಾರಾ ಹೋಟೆಲ್‌ನಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಂದೆ
Views: 38
ಕನ್ನಡ ಕರಾವಳಿ ಸುದ್ದಿ: ಇಡೀ ರಾಜ್ಯವೇ ಬೆಚ್ಚಿ ಬೀಳುವಂತಹ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಸ್ಟಾರ್ ಹೋಟೆಲ್ ನಲ್ಲಿ ರೂಮ್ ಬುಕ್ ಮಾಡಿ ತಂಗಿದ್ದ ತಂದೆಯೊಬ್ಬ ಹೋಟೆಲ್ ರೂಮ್ ನಲ್ಲಿಯೇ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹತ್ಯೆಗೈದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಏರ್‌ಪೋರ್ಟ್ ತಾಜ್ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ. ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಲೆಗೈದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಇಮ್ರಾನ್ ಇಬ್ಬರು ಮಕ್ಕಳನ್ನು ಕೊಂದ ಆರೋಪಿ. ತನ್ನ ಇಬ್ಬರು ಹೆಣ್ಣು ಮಕ್ಕಳಾದ ಶೇಕ್ ಜೆಹರಾ (5), ಶೇಕ್ ಜೋಯಾ (10) ರನ್ನು ಕೊಲೆ ಮಾಡಿದ್ದಾನೆ.
ಇಮ್ರಾನ್ ತನ್ನ ಮಕ್ಕಳನ್ನ ಕೊಲೆ ಮಾಡಲೆಂದೇ ಪ್ಲಾನ್ ಮಾಡಿ ಮೊದಲೇ ಹೋಟೆಲ್‌ನಲ್ಲಿ ರೂಂ ಬುಕ್ ಮಾಡಿದ್ದ. ಕೃತ್ಯದ ಬಳಿಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ. ಇಮ್ರಾನ್ ಮೂಲತಃ ಬೆಂಗಳೂರಿನ ನಾಗವಾರದ ನಿವಾಸಿಯಾಗಿದ್ದು, ಜಿಮ್ಮಿ ಕ್ಯಾಬ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದ.
ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಇಮ್ರಾನ್‌ನನ್ನು ಸದ್ಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.






