ಇತರೆ

ಪಡುಬಿದ್ರಿಯಲ್ಲಿ ಮಹಿಳೆಯರನ್ನು ಪುಸಲಾಯಿಸಿ ವೇಶ್ಯಾವಾಟಿಕೆ ದಂಧೆ: ಇಬ್ಬರ ರಕ್ಷಣೆ

Views: 217

ಕನ್ನಡ ಕರಾವಳಿ ಸುದ್ದಿ: ಪಡುಬಿದ್ರಿ ಸಮೀಪದ ಮಹಾದೇವಿ ಟೂರಿಸ್ಟ್ ಹೋಮ್ ಕಟ್ಟಡದಲ್ಲಿ ಮಹಿಳೆಯರನ್ನು ಪುಸಲಾಯಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಪಡುಬಿದ್ರೆ ಪೊಲೀಸರು ಡಿ.14ರಂದು ಬಂಧಿಸಿದ್ದಾರೆ.

ಸ್ಥಳದಿಂದ 4 ಮೊಬೈಲ್ ಫೋನ್‌ಗಳು, 3,600 ರೂ. ನಗದು ಮತ್ತು ಹಲವು ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ.

ಯತಿರಾಜ್‌ ಶೆಟ್ಟಿ ಪೊಲ್ಯ ಮತ್ತು ನವೀನ್ ಪೂಜಾರಿ ಬಂಧಿತ ಆರೋಪಿಗಳು. ಇವರು ಅಕ್ರಮವಾಗಿ ಹಣ ಗಳಿಸುವ ಉದ್ದೇಶದಿಂದ ಮಹಿಳೆಯರನ್ನು ಪುಸಲಾಯಿಸಿ ಕಳ್ಳಸಾಗಾಣಿಕೆ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದು, ಈ ಬಗ್ಗೆ ಖಚಿತ ಮಾಹಿತಿಯಂತೆ ಪಡುಬಿದ್ರಿ ಪೊಲೀಸರು ದಾಳಿ ನಡೆಸಿ ಇಬ್ಬರು ಸಂತ್ರಸ್ತ ಮಹಿಳೆಯರನ್ನು ರಕ್ಷಿಸಿದ್ದಾರೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!