ಯುವಜನ

ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಇನ್‌ಸ್ಟಾಗ್ರಾಮ್ ಪ್ರೀತಿ: ಯುವತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ

Views: 0

ಕನ್ನಡ ಕರಾವಳಿ ಸುದ್ದಿ: ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ.

ತಿಪ್ಪೇಸ್ವಾಮಿ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತನಿಗೆ ದಾವಣಗೆರೆ ಮೂಲದ ಮಹಿಳೆಯೊಬ್ಬರಿಗೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿತ್ತು. ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಾಲ ಕಳೆದಂತೆ ಇಬ್ಬರ ಪರಿಚಯ ಪ್ರೀತಿಗೆ ತಿರುಗಿತ್ತು.

ಪತಿ ಮತ್ತು ಇಬ್ಬರು ಮಕ್ಕಳನ್ನು ಬಿಟ್ಟು ಬಂದಿದ್ದ ಈಕೆ, ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ಬಾಡಿಗೆ ಮನೆ ಪಡೆದು ಗಂಡ-ಹೆಂಡತಿ ಎಂದು ನಂಬಿಸಿ, ತಿಂಗಳಿಗೆ 3 ಸಾವಿರ ರೂಪಾಯಿಯಂತೆ ಬಾಡಿಗೆ ಕೊಟ್ಟು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚಿಗೆ ಮಹಿಳೆ ನನ್ನನ್ನು ಮೆಂಟೈನ್ ಮಾಡಲು ನಿನ್ನಿಂದ ಆಗಲ್ಲ ಬಿಟ್ಟು ಬಿಡು ಎಂದು ಯುವಕನಿಗೆ ಕಿರುಕುಳ ನೀಡಿದ್ದಳು. ಇದಕ್ಕೆ ಮನನೊಂದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಈ ಕುರಿತು ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ಬೆನ್ನಲ್ಲೇ ಮಹಿಳೆ ನಾಪತ್ತೆಯಾಗಿದ್ದು ಮಹಿಳೆಯ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

Related Articles

Back to top button
error: Content is protected !!