ಸಾಮಾಜಿಕ

ಪತಿ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ, ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Views: 101

ಕೋಲಾರ: ಪತಿ ಹಾಗೂ ಆತನ ಕುಟುಂಬಸ್ಥರಿಂದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಕೆಜಿಎಫ್‌ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ. ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದಳು.

ಮೃತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Related Articles

Back to top button
error: Content is protected !!