ಇತರೆ

ಪತ್ನಿಯಿಂದಲೇ ವೈದ್ಯ ಪತಿಯ ಭೀಕರ ಹತ್ಯೆ, ಮಗುವಿನ ಮೇಲೂ ಕ್ರೂರ ದಾಳಿ

Views: 83

ಕನ್ನಡ ಕರಾವಳಿ ಸುದ್ದಿ: ಧಾರವಾಡದಲ್ಲಿ ಚಿರಾಯು ಆಸ್ಪತ್ರೆಯ ವೈದ್ಯ ಡಾ. ಕಿರಣ್ ಹೊನ್ನಣ್ಣನವರ್ ಅವರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕರ್ನಾಟಕ ವಿವಿ ರಸ್ತೆಯ ರಂಕಾ ಸ್ಟೆಲ್ಲೊ ಅಪಾರ್ಟ್ಮೆಂಟ್ ನಲ್ಲಿ ನೆಲೆಸಿದ್ದ ವೈದ್ಯ ಕಿರಣ್ ಗೆ ಅವರ ಪತ್ನಿ ಡಾ.ಪ್ರಿಯಾ ಅವರೇ ಚೂರಿಯಿಂದ ಇರಿದು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು ಆಕೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಗುವಿನ ಮೇಲೂ ಕ್ರೂರ ದಾಳಿ: ಪತಿಯನ್ನು ಒಂದು ಕೋಣೆಯಲ್ಲಿ ಕೊಂದ ಬಳಿಕ ಈಕೆಯ ಕ್ರೌರ್ಯ ಅಲ್ಲಿಗೆ ನಿಲ್ಲಲಿಲ್ಲ. ಮತ್ತೊಂದು ಕೋಣೆಯಲ್ಲಿದ್ದ ಎಂಟು ವರ್ಷದ ಮಗ ನೇಹಿತ್ ಮೇಲೂ ಚಾಕುವಿನಿಂದ ಮನಬಂದಂತೆ ಇರಿದಿದ್ದಾಳೆ. ರಕ್ತದ ಮಡುವಿನಲ್ಲಿ ಉಸಿರಾಡಲು ಒದ್ದಾಡುತ್ತಿದ್ದ ಮಗುವಿನ ಪಕ್ಕದಲ್ಲೇ ಕುಳಿತು ಈಕೆ ಅತ್ಯಂತ ನಿರ್ಲಜ್ಜವಾಗಿ ತನ್ನ ಮೊಬೈಲ್ ಫೋನ್ ನೋಡುತ್ತಾ ಕುಳಿತಿದ್ದಳು ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಉಪನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Related Articles

Back to top button
error: Content is protected !!