ಇತರೆ
ಪತ್ನಿಯಿಂದ ಕಿರುಕುಳ ತಾಳಲಾರದೇ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ
Views: 103
ಕನ್ನಡ ಕರಾವಳಿ ಸುದ್ದಿ: ಪತ್ನಿಯಿಂದ ಕಿರುಕುಳ ತಾಳಲಾರದೇ ಬ್ಯಾಂಕ್ ಉದ್ಯೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಗಿರಿನಗರದಲ್ಲಿ ನಡೆದಿದೆ.
ಗಗನ್ ರಾವ್ ನೇಣಿಗೆ ಶರಣಾದ ಪತಿ. 8 ತಿಂಗಳ ಹಿಂದಷ್ಟೇ ಮೇಘನಾ ಜಾವ್ ಅವರೊಂದಿಗೆ ಗಗನ್ ರಾವ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಬ್ಯಾಂಕ್ ಉದ್ಯೋಗಿಯಾಗಿದ್ದ ಗಗನ್ ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಘನಾ, ಗಗನ್ ಮೇಲೆ ಅನುಮಾನ ಪಡುತ್ತಿದ್ದಳಂತೆ. ಇದೇ ವಿಚಾರಕ್ಕೆ ಮನೆಯಲ್ಲಿ ಹಲವು ಬಾರಿ ಗಲಾಟೆ ಆಗಿತ್ತು. ಬಳಿಕ ಕೋಪಿಸಿಕೊಂಡು ತವರಿಗೆ ಹೋಗಿದ್ದ ಮೇಘನಾ, ಇತ್ತೀಚೆಗಷ್ಟೇ ಗಂಡನ ಮನೆಗೆ ವಾಪಸ್ ಬಂದಿದ್ದಳು.ರಾತ್ರಿ ಮತ್ತೆ ಗಲಾಟೆ ನಡೆದಿದೆ. ಇದರಿಂದ ಬೇಸತ್ತ ಗಗನ್ ನೇಣಿಗೆ ಶರಣಾಗಿದ್ದಾರೆ.






