ಇತರೆ

ಪತ್ನಿ ಜೊತೆ ಸೆಲ್ಪಿ ತೆಗೆದುಕೊಳ್ಳುತ್ತಿದ್ದಾಗ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವು

Views: 196

ಕನ್ನಡ ಕರಾವಳಿ ಸುದ್ದಿ: ಪತ್ನಿ ಜೊತೆ ಸೆಲ್ಪಿ ತೆಗೆದುಕೊಳ್ಳಲು ಹೋಗಿ 60 ಅಡಿ ಆಳದ ಪ್ರಪಾತಕ್ಕೆ ಬಿದ್ದು ಶಿಕ್ಷಕ ಸಾವನ್ನಪ್ಪಿದ ದುರ್ಘಟನೆ ಚಿಕ್ಕಮಂಗಳೂರು ಕೆಮ್ಮಣ್ಣುಗುಂಡಿಯ ಬಳಿ ನಡೆದಿದೆ.

ಮೃತ ಶಿಕ್ಷಕನನ್ನು ಸಂತೋಷ್ (40) ಎಂದು ಗುರುತಿಸಲಾಗಿದೆ. ತರೀಕೆರೆ ತಾಲೂಕಿನ ಕೆಮ್ಮಣ್ಣುಗುಂಡಿಗೆ ಪತ್ನಿ ಜೊತೆ ಬಂದಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ಪತ್ನಿಯೊಂದಿಗೆ ಸೆಲ್ಪಿ ತೆಗೆದುಕೊಳ್ಳುವಾಗ ಆಯತಪ್ಪಿ ಪ್ರಪಾತಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರ ತಲೆಗೆ ಬಲವಾದ ಗಾಯವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸಂತೋಷ್ ಅವರು ತರೀಕೆರೆ ತಾಲೂಕಿನ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಪಾತದಿಂದ ಮೃತದೇಹವನ್ನು ತೆಗೆದಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related Articles

Back to top button
error: Content is protected !!