ಜನಮನ

ಪತ್ನಿ, ಮಾವನ ಕಾಟಕ್ಕೆ ಬೇಸತ್ತು ರೈಲಿಗೆ ತಲೆಕೊಟ್ಟು ಹೆಡ್ ಕಾನ್ಸ್ ಟೇಬಲ್ ಆತ್ಮಹತ್ಯೆ 

Views: 104

ಕನ್ನಡ ಕರಾವಳಿ ಸುದ್ದಿ: ಪತ್ನಿ ಮತ್ತು  ಮಾವನ ಕಾಟಕ್ಕೆ ಬೇಸತ್ತು ಹೆಡ್ ಕಾನ್ಸ್ ಟೇಬಲ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.

ಡೆತ್ ನೋಟ್ ಬರೆದಿಟ್ಟು ನಿನ್ನೆ ರಾತ್ರಿ ಬೈಯಪ್ಪನಹಳ್ಳಿ ರೈಲ್ವೆ ನಿಲ್ದಾಣಕ್ಕೆ ತೆರಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಪತ್ನಿ ಹಾಗೂ ಮಾವನ ವಿರುದ್ಧ ಗಂಭೀರ ಆರೋಪ ಮಾಡಿರುವ ತಿಪ್ಪಣ್ಣ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾವನ ವಿರುದ್ಧ ಬೆದರಿಕೆ ಆರೋಪ ಕೂಡ ಮಾಡಿದ್ದಾರೆ.

ಹೆಚ್.ಸಿ ತಿಪ್ಪಣ್ಣ ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ, ಮೃತದೇಹವನ್ನು ಸಿವಿ ರಾಮನ್ ನಗರ ಆಸ್ಪತ್ರೆಗೆ ರವಾನಿಸಲಾಗಿದೆ.

ನಾನು ನನ್ನ ಪತ್ನಿಯ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇವೆ. ನನ್ನ ಪತ್ನಿಯ ತಂದೆ ಯಮುನಪ್ಪ ನನಗೆ ಜೀವ ಬೆದರಿಕೆ ಹಾಕಿರುತ್ತಾನೆ. ಡಿ.12 ರಂದು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿರುತ್ತಾನೆ. ಬೆಳಿಗ್ಗೆ ನಾನು ದೂರವಾಣಿ ಮಾಡಿದಾಗಲೂ ಕೂಡ ನೀನು ಸತ್ತು ಹೋಗು ನನ್ನ ಮಗಳು ಚೆನ್ನಾಗಿ ಇರುತ್ತಾಳೆ ಎಂದು ಹೇಳಿ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ ಎಂದು ಡೆತ್‌ನೋಟ್‌ನಲ್ಲಿ ಪೊಲೀಸ್ ಪೇದೆ ಉಲ್ಲೇಖಿಸಿದ್ದಾರೆ.

Related Articles

Back to top button
error: Content is protected !!