ಇತರೆ

ಪಬ್ ನಲ್ಲಿ ಆಕಸ್ಮಿಕ ಬೆಂಕಿ ಅವಘಡ: ಇಬ್ಬರು ಸಜೀವ ದಹನ; 7 ಜನರ ಸ್ಥಿತಿ ಗಂಭೀರ

Views: 43

ಕನ್ನಡ ಕರಾವಳಿ ಸುದ್ದಿ: ಪಬ್ ವೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ರಿಂಗ್ ರಸ್ತೆಯಲ್ಲಿನ ದಟ್ಟಗಳ್ಳಿಯಲ್ಲಿನ 4ನೇ ಹಂತದಲ್ಲಿರುವ ಪಬ್ ನಲ್ಲಿ ಈ ದುರಂತ ಸಂಭವಿಸಿದೆ. ಬೆಂಕಿ ಅವಘಡದಲ್ಲಿ ಇಬ್ಬರು ಸಜೀವದಹನವಾಗಿದ್ದಾರೆ. ಘಟನೆಯಲ್ಲಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ಸಾಹಿಲ್ ಹಾಗೂ ಪ್ರಕಾಶ್ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಪಬ್ ನ ಉದ್ಯೋಗಿಗಳು ಎಂದು ತಿಳಿದುಬಂದಿದೆ. ಬೆಂಕಿ ಅವಘಡದಿಂದಾಗಿ ಇಡೀ ಪಬ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

Related Articles

Back to top button
error: Content is protected !!